Friday, May 17, 2024
Homeಕರಾವಳಿಮಂಗಳೂರು: ಕರ್ತವ್ಯಲೋಪ ಎಸಗಿದ ಆರೋಪ; ಡಿಡಿಪಿಯು ಅಮಾನತು

ಮಂಗಳೂರು: ಕರ್ತವ್ಯಲೋಪ ಎಸಗಿದ ಆರೋಪ; ಡಿಡಿಪಿಯು ಅಮಾನತು

spot_img
- Advertisement -
- Advertisement -

ಮಂಗಳೂರು:  ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕರ್ತವ್ಯಲೋಪ ಎಸಗಿದ ಆರೋಪದಡಿ ದ.ಕ. ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಜಯಣ್ಣ ಅವರನ್ನು ದ.ಕ. ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅಮಾನತುಗೊಳಿಸಿದ್ದಾರೆ.

 ಜಿಲ್ಲಾ ಚುನಾವಣಾಧಿಕಾರಿ ಅವರಿಂದ ಅನುಮತಿ ಪಡೆಯದೆ ಬೆಂಗಳೂರಿಗೆ ತೆರಳಿ ಕರ್ತವ್ಯಲೋಪ ಎಸಗಿದ್ದಾರೆ ಎಂಬ ಆರೋಪದಡಿಯಲ್ಲಿ  ಜಯಣ್ಣ ಅವರನ್ನು ದ.ಕ. ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅಮಾನತುಗೊಳಿಸಿದ್ದಾರೆ.

ಮೇ 9ರಂದು ಜಿಲ್ಲಾ ಚುನಾವಣಾಧಿಕಾರಿ ಕರೆದ ಪತ್ರಿಕಾ ಗೋಷ್ಠಿಯಲ್ಲಿ ಭಾಗವಹಿಸುವಂತೆ ಡಿಡಿಪಿಯು ಅವರಿಗೆ ಸೂಚನೆ ನೀಡಲಾಗಿತ್ತು. ಆದರೆ ಅವರು ಗೈರಾಗಿದ್ದರು. ಈ ಬಗ್ಗೆ ನೋಟೀಸ್‌ ನೀಡಲಾಗಿತ್ತು. ಅದಕ್ಕೆ ನೀಡಿದ ಉತ್ತರ ಸಮಾಧಾನ ತರಲಿಲ್ಲ ಎಂಬ ನೆಲೆಯಿಂದ ಡಿಡಿಪಿಯು ಅವರನ್ನು ಅಮಾನತುಗೊಳಿಸಲಾಗಿದೆ. ಕೊಕ್ಕಡ ಪಿಯು ಕಾಲೇಜು ಪ್ರಾಂಶುಪಾಲ ವೆಂಕಟೇಶಮೂರ್ತಿ ಅವರನ್ನು ಪ್ರಭಾರವಾಗಿ ನೇಮಕ ಮಾಡಲಾಗಿದೆ.ಮೇ 22ರಂದು ಜಯಣ್ಣ ಮತ್ತೆ ಲಿಖೀತ ಉತ್ತರ ನೀಡಿದ್ದು, ನನ್ನ ಮೇಲಿನ ಎಲ್ಲ ಆರೋಪಗಳನ್ನು ನಿರಾಕರಿಸುವುದಾಗಿ ಉಲ್ಲೇಖಿಸಿದ್ದಾರೆ.

- Advertisement -
spot_img

Latest News

error: Content is protected !!