Thursday, June 4, 2026
Homeಕರಾವಳಿಮಂಜೇಶ್ವರದಲ್ಲಿ ಕೆರೆಯಲ್ಲಿ ಕಾರ್ಮಿಕನ ಶವ ಪತ್ತೆ

ಮಂಜೇಶ್ವರದಲ್ಲಿ ಕೆರೆಯಲ್ಲಿ ಕಾರ್ಮಿಕನ ಶವ ಪತ್ತೆ

- Advertisement -
- Advertisement -

ಮಂಜೇಶ್ವರ: ಮಂಜೇಶ್ವರ ಠಾಣಾ ವ್ಯಾಪ್ತಿಯ ಕುಂಜತ್ತೂರು ಎಂಬಲ್ಲಿ ಕೆರೆಯಲ್ಲಿ ಉತ್ತರ ಪ್ರದೇಶ ಮೂಲದ ಕಾರ್ಮಿಕನೋರ್ವನ ಮೃತದೇಹ ಪತ್ತೆಯಾಗಿದೆ. ಈತನ ಸಾವಿನ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ನಿಗೂಢ ಸಾವಿನ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಅನಿಲ್ ಕುಮಾರ್ ಮೃತಪಟ್ಟ ದುರ್ದೈವಿ. ವಿದ್ಯುತ್ ಕಂಬ ತಯಾರಿ ಘಟಕದಲ್ಲಿ ಕಾರ್ಮಿಕನಾಗಿ ಅನಿಲ್ ಕೆಲಸ ಮಾಡುತ್ತಿದ್ದರು. ಎರಡು ದಿನಗಳಿಂದ ನಾಪತ್ತೆಯಾಗಿದ್ದ ಇವರ ಮೃತದೇಹ ನಿನ್ನೆ ಸಂಜೆ ಕುಂಜತ್ತೂರು ಅಂಬಿತ್ತಡಿ ಎಂಬಲ್ಲಿನ ಖಾಸಗಿ ವ್ಯಕ್ತಿಯೋರ್ವರ ಕೆರೆಯಲ್ಲಿ ಪತ್ತೆಯಾಗಿತ್ತು. ದುರ್ವಾಸನೆ ಬರುತ್ತಿದ್ದ ಹಿನ್ನಲೆಯಲ್ಲಿ ಪರಿಸರವಾಸಿಗಳು ಗಮನಿಸಿದಾಗ ಕೆರೆಯಲ್ಲಿ ಮೃತದೇಹ ಪತ್ತೆಯಾಗಿದೆ.

ಅನಿಲ್ ತಲೆಯಲ್ಲಿ ಗಾಯ ಕಂಡು ಬಂದಿದೆಯೆನ್ನಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ನೈಜ ಕಾರಣ ತಿಳಿದು ಬರಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

- Advertisement -

Latest News

error: Content is protected !!