ಉತ್ತರಕನ್ನಡ; ಮುರುಡೇಶ್ವರಕ್ಕೆ ಪ್ರವಾಸಕ್ಕೆಂದು ಬಂದು ಸಮುದ್ರ ಪಾಲಾಗಿದ್ದ ಮೂವರು ಬಾಲಕಿಯರ ಮೃತದೇಹ ಪತ್ತೆಯಾಗಿದೆ. ದೀಕ್ಷಾ (15), ಲಾವಣ್ಯ (15) ಹಾಗೂ ವಂದನಾ (15) ಮೃತ ವಿದ್ಯಾರ್ಥಿನಿಯರು.
ಇಂದು ಮೂವರು ವಿದ್ಯಾರ್ಥಿನಿಯರ ಮೃತದೇಹವನ್ನು ಕರಾವಳಿ ಕಾವಲುಪಡೆ ಪೊಲೀಸರು ಪತ್ತೆ ಮಾಡಿದ್ದಾರೆ. ಇಲ್ಲಿನ ನವೀನ್ ಬೀಚ್ ರೆಸಾರ್ಟ್ ಬಳಿಯ ಸಮುದ್ರದಲ್ಲಿ ತೇಲುತ್ತಿದ್ದ ಇಬ್ಬರು ವಿದ್ಯಾರ್ಥಿನಿಯರ ಮೃತದೇಹ ಪತ್ತೆಯಾದರೇ ಮತ್ತೊಂದು ಮೃತದೇಹ ಅಳವೆಕೋಡಿಯಲ್ಲಿ ಪತ್ತೆಯಾಗಿದೆ.
ಕೋಲಾರದ ಮುಳುಬಾಗಿಲಿನ ಕೊತ್ತೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ 57ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆತರಲಾಗಿತ್ತು.ನಿನ್ನೆ ದಿನ ಸಂಜೆ ಸಮುದ್ರದಲ್ಲಿ ಆಟವಾಡುತಿದ್ದ ವೇಳೆ ಸಮುದ್ರದಲ್ಲಿ ಏಳು ವಿದ್ಯಾರ್ಥಿನಿಯರು ನೀರು ಪಾಲಾಗಿದ್ದರು . ಆ ಪೈಕಿ ಮೂವರನ್ನು ಲೈಫ್ ಗಾರ್ಡ್ಸ್ ಸಿಬ್ಬಂದಿ ರಕ್ಷಣೆ ಮಾಡಿದ್ರೆ ಶ್ರಾವಂತಿ ಎಂಬಾಕೆ ಸಾವನ್ನಪ್ಪಿದ್ದಳು.
ದೀಕ್ಷಾ, ಲಾವಣ್ಯ, ವಂದನಾ ನೀರಿನಲ್ಲಿ ಕೊಚ್ಚಿ ಹೋಗಿ ಕಾಣೆಯಾಗಿದ್ದರು. ಇವರ ಹುಡುಕಾಟಕ್ಕೆ ಮೂರು ತಂಡ ರಚನೆಮಾಡಿ ಮುರುಡೇಶ್ವರ ಕಡಲತೀರದಲ್ಲಿ ಶೋಧ ನಡೆಸಿದ್ದು ಕೊನೆಗೂ ಮೂರು ಶವಗಳು ಪತ್ತೆಯಾಗಿದ್ದು ಇದೀಗ ಸಾವಿನ ಸಂಖ್ಯೆ ನಾಲ್ಕಕ್ಕೆ ಏರಿಕೆ ಕಂಡಿದೆ.