Wednesday, June 3, 2026
Homeಕರಾವಳಿಧರ್ಮಸ್ಥಳ ಸ್ನಾನಘಟ್ಟದ ಬಳಿ ಮಹಿಳೆಯರಿಬ್ಬರ ಶವ ಪತ್ತೆ...

ಧರ್ಮಸ್ಥಳ ಸ್ನಾನಘಟ್ಟದ ಬಳಿ ಮಹಿಳೆಯರಿಬ್ಬರ ಶವ ಪತ್ತೆ…

- Advertisement -
- Advertisement -

ಬೆಳ್ತಂಗಡಿ : ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟದ ಕಿಂಡಿ ಅಣೆಕಟ್ಟಿನ ಬಳಿ ಇಬ್ಬರು ಅಪರಿಚಿತ ಮಹಿಳೆಯರ ಮೃತದೇಹ ಪತ್ತೆಯಾಗಿದೆ.


ಮೃತ ಇಬ್ಬರು ಮಹಿಳೆಯರು ಸುಮಾರು 45 ಮತ್ತು 25 ವರ್ಷ ಪ್ರಾಯದವರು ಎಂದು ಅಂದಾಜಿಸಲಾಗಿದೆ.

ನೇತ್ರಾವತಿ ನದಿಯಲ್ಲಿ ತೀರ್ಥ ಸ್ನಾನಕ್ಕೆ ಆಗಮಿಸಿದ್ದ ಯಾತಾರ್ಥಿಗಳು ಶವಗಳನ್ನು ನೋಡಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಶವಗಳ ಬಳಿ ಯಾವುದೇ ಗುರುತಿನ ವಿವರಗಳು ಪತ್ತೆಯಾಗಿಲ್ಲ. ಈ ಬಗ್ಗೆ ಧರ್ಮಸ್ಥಳ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!