Thursday, June 4, 2026
Homeಕರಾವಳಿಬೆಳ್ತಂಗಡಿ: ಬೆಳಾಲು ಕೂಡಿಗೆ ನೇತ್ರಾವತಿ ನದಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ

ಬೆಳ್ತಂಗಡಿ: ಬೆಳಾಲು ಕೂಡಿಗೆ ನೇತ್ರಾವತಿ ನದಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ

- Advertisement -
- Advertisement -

ಬೆಳ್ತಂಗಡಿ: ಇಲ್ಲಿನ ಬೆಳಾಲು ಕೂಡಿಗೆ ನೇತ್ರಾವತಿ ನದಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ. ನಿನ್ನೆ ಸುರಿದ ಭಾರೀ ಮಳೆಗೆ ಮೃತದೇಹ ನದಿಯಲ್ಲಿ ಕೊಚ್ಚಿಕೊಂಡು ಬಂದಿರುವ ಶಂಕೆ ವ್ಯಕ್ತವಾಗಿದೆ.

ಧರ್ಮಸ್ಥಳದ ನೇತ್ರಾವತಿ ನದಿಯಿಂದ ಸಂಪರ್ಕಿಸುವ ನದಿ ಇದಾಗಿದ್ದು, ಸ್ಥಳಕ್ಕೆ ಧರ್ಮಸ್ಥಳ ಪೊಲೀಸ್ ಠಾಣೆಯ ಪಿಎಸ್ಐ ಅನಿಲ್ ಕುಮಾರ್.ಡಿ ಮತ್ತು ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು. ಶವವನ್ನು ಬೆಳ್ತಂಗಡಿ ಶವಗಾರಕ್ಕೆ ರವಾನಿಸಿದ್ದಾರೆ‌. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!