Saturday, June 27, 2026
Homeಕರಾವಳಿಮುಂಡಾಜೆಯಲ್ಲಿ ನೀರಿನಲ್ಲಿ ಮುಳುಗಿದ್ದ ಯುವಕನ ಶವ ಪತ್ತೆ

ಮುಂಡಾಜೆಯಲ್ಲಿ ನೀರಿನಲ್ಲಿ ಮುಳುಗಿದ್ದ ಯುವಕನ ಶವ ಪತ್ತೆ

- Advertisement -
- Advertisement -

ಬೆಳ್ತಂಗಡಿ: ಮುಂಡಾಜೆ ಗ್ರಾಮದ ಪರಮುಖ ಎಂಬಲ್ಲಿ ಆದಿತ್ಯವಾರ ಸಂಜೆ ನೇತ್ರಾವತಿ ನದಿಗೆ ತನ್ನ ಸಹೋದರ ಸಂಬಂಧಿಯೊಂದಿಗೆ ಸ್ನಾನ ಮಾಡಲು ತೆರಳಿದ್ದ ಕಬಕದ ನಿವಾಸಿ ಯುವಕ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ.

ಪುತ್ತೂರು ಕಬಕ ನಿವಾಸಿಯಾಗಿರುವ ಕಿರಣ್ (20)ಎಂಬಾತ ಬೆಳ್ತಂಗಡಿ ತಾಲೂಕಿನ ಮುಂಡಾಜೆಯಲ್ಲಿರುವ ತನ್ನ ಅಜ್ಜಿ ಮನೆಗೆ ಬಂದಾಗ ಘಟನೆ ನಡೆದಿದೆ.

ಭಾನುವಾರ ಸಂಜೆಯಿಂದ ಸ್ಥಳೀಯರು ಹಾಗೂ ಅಗ್ನಿಶಾಮಕ ದಳ ತಡರಾತ್ರಿ ವರೆಗೂ ಕಾರ್ಯಾಚರಣೆ ನಡೆಸಿದರೂ ಯುವಕ ಪತ್ತೆಯಾಗಿರಲಿಲ್ಲ .ಇಂದು ಬೆಳಗ್ಗೆ ಮತ್ತೆ ಹುಡುಕಾಡಿದಾಗ ಮೃತ ದೇಹ ಪತ್ತೆಯಾಗಿದೆ. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!