- Advertisement -
- Advertisement -
ಬೆಳ್ತಂಗಡಿ : ಅಪರಿಚಿತ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬೆಳ್ತಂಗಡಿಯ ಗೇರುಕಟ್ಟೆಯಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಗೇರುಕಟ್ಟೆ ಪೇಟೆಯ ಹಿಂಭಾಗದ ಖಾಸಗಿ ವ್ಯಕ್ತಿಗೆ ಸೇರಿದ ಜಾಗದ ಕೆರೆಯಲ್ಲಿ ಆ.22 ರಂದು ಸಂಜೆ ಅಪರಿಚಿತ ಶವ ಕೊಳೆತ ರೀತಿಯಲ್ಲಿ ಪತ್ತೆಯಾಗಿದೆ.
ತೋಟದ ಕೆಲಸ ಮಾಡುವವರು ಕೆರೆಯಲ್ಲಿ ಮೃತದೇಹ ನೋಡಿದ್ದಾರೆ.ಈ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ , ಸಬ್ ಇನ್ಸ್ಪೆಕ್ಟರ್ ಮುರುಳಿಧರ್ ನಾಯ್ಕ್ ದ ಪೊಲೀಸರು ಹಾಗೂ ಪುತ್ತೂರು ಎಫ್.ಎಸ್.ಎಲ್ ಸೊಕೊ ತಂಡದ ಅರ್ಪಿತಾ ಮತ್ತು ಕಾವ್ಯಶ್ರೀ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
- Advertisement -