Thursday, May 2, 2024
Homeಕರಾವಳಿಬೆಳ್ತಂಗಡಿಯಲ್ಲಿ ಸಾರ್ವಜನಿಕ ಕುಡಿಯುವ ನೀರಿನ ಟ್ಯಾಂಕಿನಲ್ಲಿ  ಅಪರಿಚಿತ ವ್ಯಕ್ತಿಯ ಶವ ಪತ್ತೆ

ಬೆಳ್ತಂಗಡಿಯಲ್ಲಿ ಸಾರ್ವಜನಿಕ ಕುಡಿಯುವ ನೀರಿನ ಟ್ಯಾಂಕಿನಲ್ಲಿ  ಅಪರಿಚಿತ ವ್ಯಕ್ತಿಯ ಶವ ಪತ್ತೆ

spot_img
- Advertisement -
- Advertisement -

ಬೆಳ್ತಂಗಡಿ; ಸಾರ್ವಜನಿಕ ಕುಡಿಯುವ ನೀರಿನ ಟ್ಯಾಂಕಿನಲ್ಲಿ  ಅಪರಿಚಿತ ವ್ಯಕ್ತಿಯ ಶವ ಪತ್ತೆಯಾದ ಘಟನೆ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕಾಯರ್ತಡ್ಕ ಬಳಿ ನಡೆದಿದೆ.

ನಿನ್ನೆ ಬೆಳಿಗ್ಗೆ ಈ ಟ್ಯಾಂಕ್‌ನಿಂದ ಸ್ಥಳೀಯ ಪರಿಸರದಲ್ಲಿ ನೀರು ಪೂರೈಕೆ ಮಾಡಲಾಗಿದ್ದು, ನೀರು ದುರ್ವಾಸನೆ ಬರುತ್ತಿರುವುದನ್ನು ಸಾರ್ವಜನಿಕರು ಪಂಚಾಯಿತ್ ಗಮನಕ್ಕೆ ತಂದಿದ್ದಾರೆ. ಸಂಬಂಧಪಟ್ಟವರು ಈ ಕುರಿತು ಬಂದು ಪರಿಶೀಲಿಸಿದಾಗ ನೀರಿನ ಟ್ಯಾಂಕ್ ನಲ್ಲಿ ಅಪರಿಚಿತ ವ್ಯಕ್ತಿಯ ಶವ ತೇಲಾಡುತ್ತಿರುವುದು ಪತ್ತೆಯಾಗಿದೆ.

ಶವ ಕೊಳೆತು ಹೋಗಿದ್ದು, ಟ್ಯಾಂಕ್ ನೀರು ಬಳಸುವ ಸಾರ್ವಜನಿಕರಲ್ಲಿ ವಾಟ್ಸಾಪ್ ಮೂಲಕ ಗ್ರಾಮಸ್ಥರು ಈ ನೀರು ಬಳಸದಂತೆ ವಿನಂತಿಸಿದ್ದಾರೆ.ಸ್ಥಳಕ್ಕೆ ಧರ್ಮಸ್ಥಳ‌ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.ಇನ್ನು ಕಾಯರ್ತಡ್ಕದ ವೈನ್ ಶಾಪ್ ಒಂದರಲ್ಲಿ ಕೆಲಸಕ್ಕಿದ್ದ ಉತ್ತರ ಭಾರತದ ವ್ಯಕ್ತಿ ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದು ಆತನ ಮೃತದೇಹವಿರಬೇಕು ಎಂಬ ಸಂದೇಹ ವ್ಯಕ್ತವಾಗಿದೆ.

- Advertisement -
spot_img

Latest News

error: Content is protected !!