Wednesday, June 24, 2026
Homeಕರಾವಳಿಉಳ್ಳಾಲ: ಓವರ್ ಟೇಕ್ ಮಾಡಲು ಹೋದ ಯುವಕ ಭೀಕರ ಅಪಘಾತದಲ್ಲಿ ಸಾವು !

ಉಳ್ಳಾಲ: ಓವರ್ ಟೇಕ್ ಮಾಡಲು ಹೋದ ಯುವಕ ಭೀಕರ ಅಪಘಾತದಲ್ಲಿ ಸಾವು !

- Advertisement -
- Advertisement -

ಇಂದು ಬೆಳಗ್ಗೆ ಮಂಗಳೂರು ನಗರದ ಹೊರವಲಯದ ಉಳ್ಳಾಲ ಮಾಸ್ತಿಕಟ್ಟೆ ಬಳಿ ಓವರ್ ಟೇಕ್ ಮಾಡುವ ಭರದಲ್ಲಿ ಸವಾರನ ನಿಯಂತ್ರಣ ತಪ್ಪಿದ ಬೈಕ್, ರಸ್ತೆ ಬದಿಯ ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಸಾವನ್ನಪ್ಪಿದ ವ್ಯಕ್ತಿ ಉಳ್ಳಾಲ ಮದನಿ ನಗರ ನಿವಾಸಿ ಮಹಮ್ಮದ್ ಕೈಫ್ ಎಂದು ಗುರುತಿಸಲಾಗಿದೆ. ವೇಗವಾಗಿ ಬಂದ ದ್ವಿಚಕ್ರ ವಾಹನ ಆಟೋ ರಿಕ್ಷಾವೊಂದನ್ನು ಓವರ್ ಟೇಕ್ ಮಾಡಲು ಹೋಗಿ ರಸ್ತೆ ಬದಿ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರನ ತಲೆ ಹೊಡೆದು, ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

- Advertisement -

Latest News

error: Content is protected !!