Monday, June 8, 2026
HomeUncategorizedಮಂಗಳೂರು: ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಉಪನ್ಯಾಸಕಿ ಸಾವು!!

ಮಂಗಳೂರು: ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಉಪನ್ಯಾಸಕಿ ಸಾವು!!

- Advertisement -
- Advertisement -

ಮಂಗಳೂರು: ನಗರದ ಯೆಯ್ಯಾಡಿ ಹರಿಪದವಿನಲ್ಲಿ ಸ್ಕೂಟಿಗೆ ಆಲ್ಟೋ ಕಾರು ಢಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಉಪನ್ಯಾಸಕಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ವಾಮಂಜೂರು ನಿವಾಸಿ ವಿನೋದ್ ರಾಜ್ ಅಮೀನ್ ಎಂಬವರ ಪತ್ನಿ ಪ್ರಿಯಾಂಕ (31) ಶನಿವಾರ ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ವೇಗವಾಗಿ ಬರುತ್ತಿದ್ದ ಕಾರು ಢಿಕ್ಕಿಯಾಗಿದೆ. ಇದರಿಂದಾಗಿ ಅವರು ಸ್ಕೂಟಿಯಿಂದ ಮಗುಚಿ ಬಿದ್ದಿದ್ದು, ತಲೆಗೆ ಗಂಭೀರ ಗಾಯಗಳಾಗಿದ್ದವು. ಅವರನ್ನು ಕೂಡಲೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ , ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಮಂಗಳೂರು ಪೂರ್ವ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಕೋಟೆಕಾರು ನಿವಾಸಿಯಾದ ಪ್ರಿಯಾಂಕ ಅವರು ಉಳ್ಳಾಲದ ನರ್ಸಿಂಗ್ ಕಾಲೇಜೊಂದರಲ್ಲಿ ಉಪನ್ಯಾಸಕಿಯಾಗಿದ್ದರು ಎಂದು ತಿಳಿದುಬಂದಿದೆ.

- Advertisement -

Latest News

error: Content is protected !!