Monday, June 8, 2026
Homeಅಪರಾಧರೈಲ್ವೇ ಕಾಮಗಾರಿಗಾಗಿ ನಡು ರಸ್ತೆಯಲ್ಲಿ ತೆಗೆದಿದ್ದ ಮರಣ ಗುಂಡಿ; ಗುಂಡಿಗೆ ಬಿದ್ದು ಮೃತಪಟ್ಟ ಬಾಲಕಿ

ರೈಲ್ವೇ ಕಾಮಗಾರಿಗಾಗಿ ನಡು ರಸ್ತೆಯಲ್ಲಿ ತೆಗೆದಿದ್ದ ಮರಣ ಗುಂಡಿ; ಗುಂಡಿಗೆ ಬಿದ್ದು ಮೃತಪಟ್ಟ ಬಾಲಕಿ

- Advertisement -
- Advertisement -

ಶಿವಮೊಗ್ಗ: ಇಲ್ಲಿನ ಕೋಟೆಗಂಗೂರಿನಲ್ಲಿ ರೈಲ್ವೆ ಕಾಮಗಾರಿಗಾಗಿ ರಸ್ತೆ ಮಧ್ಯದಲ್ಲಿ ತೆಗೆದಿದ್ದ ಗುಂಡಿಗೆ ಬಿದ್ದು ಬಾಲಕಿಯೊಬ್ಬಳು ಮೃತಪಟ್ಟ ಘಟನೆ ನಡೆದಿದೆ.

ಮೃತ ಬಾಲಕಿ ಚೈತ್ರಾ. ಈಕೆ 5 ನೇ ತರಗತಿ ವಿದ್ಯಾರ್ಥಿನಿಯಾಗಿದ್ದು, ಶಾಲೆಯಿಂದ ಮಂಗಳವಾರ ಸಂಜೆ ಮನೆಗೆ ಬಂದಿದ್ದಳು. ಈ ವೇಳೆ ಪೋಷಕರು ಮನೆಗೆ ಬೀಗ ಹಾಕಿಕೊಂಡು ಹೊಲದಲ್ಲಿ ಕೆಲಸ ಮಾಡುತ್ತಿದ್ದರು. ಬಾಲಕಿಯು ಹೊಲಕ್ಕೆ ಹೋಗಿ ಬೀಗ ಪಡೆದುಕೊಂಡು ವಾಪಾಸ್‌ ಬರುವ ವೇಳೆಗೆ ರೈಲ್ವೆ ಟರ್ಮಿನಲ್ ನಿರ್ಮಾಣಕ್ಕಾಗಿ ತೆಗೆದಿದ್ದ ಗುಂಡಿಗೆ ಬಿದ್ದಿದ್ದಾಳೆ ಎಂದು ತಿಳಿದು ಬಂದಿದೆ.

ಇನ್ನು ಮಳೆಯಿಂದಾಗಿ ಗುಂಡಿಯಲ್ಲಿ ನೀರು ಸಂಗ್ರಹವಾಗಿದ್ದು, ಇದರಿಂದ ಬಾಲಕಿಗೆ ಮೇಲೆ ಬರಲು ಸಾಧ್ಯವಾಗದೇ ಆಕೆ ಅಲ್ಲಿಯೇ ಮೃತಪಟ್ಟಿದ್ದಾಳೆ. ಕೆಲಸ ಮುಗಿಸಿಕೊಂಡು ಬಂದ ಬಾಲಕಿಯ ತಂದೆ-ತಾಯಿ ಮಗಳಿಗಾಗಿ ಹುಡುಕಾಡಿದ್ದಾರೆ. ಈ ವೇಳೆ ಚೈತ್ರಾ ಗುಂಡಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ.

ರಸ್ತೆಯಲ್ಲಿ ಗುಂಡಿ ತೆಗೆದಿದ್ದು, ಅದಕ್ಕೆ ಯಾವುದೇ ಮುಂಜಾಗ್ರತಾ ಕ್ರಮ ಕೈಗೊಳ್ಳದಿರುವುದೇ ಘಟನೆಗೆ ಕಾರಣವಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಾಮಗಾರಿ ಗುತ್ತಿಗೆದಾರನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಮೃತ ಚೈತ್ರಾ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಘಟನೆಯ ಕುರಿತು ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!