Wednesday, June 3, 2026
HomeUncategorizedಕೋವಿಡ್ ನಿಂದ ಸಾವನ್ನಪ್ಪಿದ ರೈತರ ಸಾಲಮನ್ನ ಮಾಡುವ ಬಗ್ಗೆ ಚಿಂತನೆ!!

ಕೋವಿಡ್ ನಿಂದ ಸಾವನ್ನಪ್ಪಿದ ರೈತರ ಸಾಲಮನ್ನ ಮಾಡುವ ಬಗ್ಗೆ ಚಿಂತನೆ!!

- Advertisement -
- Advertisement -

ಬೆಂಗಳೂರು: ಕೋವಿಡ್ ನಿಂದ ಮೃತಪಟ್ಟ ರೈತರ ಸಾಲಮನ್ನಾ ಮಾಡುವ ಬಗ್ಗೆ ಇನ್ನೆರಡು ದಿನದಲ್ಲಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ತಿಳಿಸಿದ್ದಾರೆ.

1 ಲಕ್ಷ ರೂವರೆಗಿನ ಸಾಲ ಮನ್ನಾ ಮಾಡಲು ಸರ್ಕಾರ ತೀರ್ಮಾನಿಸಿದೆ. ಆರ್ಥಿಕವಾಗಿ ಸಬಲವಾಗಿರುವ ಡಿಸಿಸಿ ಬ್ಯಾಂಕ್ ಗಳ ಮೂಲಕ ಸಾಲ ಮನ್ನಾ ಪ್ರಕ್ರಿಯೆ ನಡೆಯಲಿದ್ದು, ಡಿಸಿಸಿ ಬ್ಯಾಂಕ್ ಗಳಿಗೆ ಅಪೆಕ್ಸ್ ಬ್ಯಾಂಕ್ ಗಳಿಂದ ಆರ್ಥಿಕ ನೆರವು ದೊರೆಯಲಿದೆ ಎಂದು ಸಚಿವ ಎಸ್ ಟಿ ಸೋಮಶೇಖರ್ ಹೇಳಿದ್ದಾರೆ.

ಕೋರೋನಾದಿಂದ ಸಾವನ್ನಪ್ಪಿರುವ ರೈತರಿಗೆ ಸಹಾಯ ಮಾಡಬೇಕಾದ ಹೊಣೆಗಾರಿಕೆ ಇದೆ. ಕೊರೊನಾ ವೈರಸ್ ನಿಂದ ಎಷ್ಟು ಜನ ರೈತರು ಮೃತರಾಗಿದ್ದಾರೆ ಎಂಬ ಬಗ್ಗೆ ಮಾಹಿತಿ ಕಲೆ ಹಾಕಿ, ಸಾಲಮನ್ನಾ ಮಾಡುವ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.

ಕೇಂದ್ರ ಸರ್ಕಾರ ಸಹಕಾರ ಇಲಾಖೆಯ ಸಚಿವಾಲಯ ತೆರೆದಿದ್ದು, ಸಚಿವರನ್ನು ನೇಮಕ ಮಾಡಿದೆ. ಇದುವರೆಗೆ ಸಹಕಾರ ಇಲಾಖೆಗೆ ನೆರವು ಸಿಗುತ್ತಿರಲಿಲ್ಲ. ಇದೀಗ ನೆರವು ದೊರೆಯಲಿದ್ದು, ಅದಕ್ಕಾಗಿ ಪ್ರಧಾನಿ ಅವರನ್ನು ಅಭಿನಂದಿಸುವೆ ಎಂದು ಸೋಮಶೇಖರ್ ತಿಳಿಸಿದರು.

- Advertisement -

Latest News

error: Content is protected !!