Saturday, June 27, 2026
Homeತಾಜಾ ಸುದ್ದಿಡಿಸೆಂಬರ್ 8ರಂದು ರೈತ ಸಂಘಟನೆಗಳಿಂದ ಭಾರತ್ ಬಂದ್ ಗೆ ಕರೆ

ಡಿಸೆಂಬರ್ 8ರಂದು ರೈತ ಸಂಘಟನೆಗಳಿಂದ ಭಾರತ್ ಬಂದ್ ಗೆ ಕರೆ

- Advertisement -
- Advertisement -

ನವದೆಹಲಿ: ರೈತರ ಹೋರಾಟಕ್ಕೆ ಕೇಂದ್ರ ಸರ್ಕಾರ ಸಮರ್ಪಕವಾಗಿ ಸ್ಪಂದಿಸದ ಹಿನ್ನೆಲೆಯಲ್ಲಿ ಡಿಸೆಂಬರ್ 8 ರಂದು ರೈತ ಸಂಘಟನೆಗಳು ಭಾರತ್ ಬಂದ್ ಗೆ ಕರೆ ನೀಡಿದ್ದು, ಅಂದು ದಿಲ್ಲಿಯ ಎಲ್ಲಾ ಟೋಲ್ ಬೂತ್ ಹಾಗೂ ರಸ್ತೆಗಳನ್ನು ಬಂದ್ ಮಾಡುವುದಾಗಿ ಘೋಷಿಸಿವೆ.

ಡಿಸೆಂಬರ್ 5ರಂದು ದೇಶಾದ್ಯಂತ ಪ್ರಧಾನಿ ನರೇಂದ್ರ ಮೋದಿ ಅವರ ಪ್ರತಿಕೃತಿಯನ್ನು ದಹಿಸಲಾಗುವುದು. ಡಿ.8ರಂದು ಭಾರತ್ ಬಂದ್ ನಡೆಸುವುದಾಗಿ ಭಾರತ್ ಕಿಸಾನ್ ಯೂನಿಯನ್ ಪ್ರಧಾನ ಕಾರ್ಯದರ್ಶಿ ಎಚ್ ಎಸ್ ಲಾಖೋವಾಲ್ ಸಿಂಘು ಗಡಿಯಲ್ಲಿ ಸುದ್ದಿಗಾರರ ಜತೆ ಮಾತನಾಡುತ್ತಾ ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಕೃಷಿ ತಿದ್ದುಪಡಿ ಕಾಯ್ದೆ, ಎಪಿಎಂಸಿ ಕಾಯ್ದೆ ಸೇರಿದಂತೆ ಮೂರು ಕಾಯ್ದೆಗಳನ್ನು ರದ್ದುಪಡಿಸಬೇಕೆಂಬ ಬೇಡಿಕೆಯನ್ನು ಕೇಂದ್ರ ಈಡೇರಿಸದಿದ್ದರೆ, ರೈತರ ಹೋರಾಟ ದೀರ್ಘಕಾಲದವರೆಗೂ ಮುಂದುವರಿಯಲಿದೆ ಎಂದು ಎಚ್ಚರಿಕೆ ನೀಡಿವೆ.

ಈಗಾಗಲೇ ಕಳೆದ 9ದಿನಗಳಿಂದ ದೆಹಲಿಯ ವಿವಿಧ ಗಡಿಭಾಗದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿ ಅಹೋರಾತ್ರಿ ಧರಣಿ ನಡೆಸುತ್ತಿರುವ ರೈತರು ಕೇಂದ್ರ ಸರ್ಕಾರದ ಜತೆ ಮೂರು ಸುತ್ತಿನ ಮಾತುಕತೆ ನಡೆಸಿದರೂ ಯಾವುದೇ ಅಂತಿಮ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗಿಲ್ಲ. ಇದರಿಂದಾಗಿ ಕೇಂದ್ರ ಮತ್ತು ರೈತರ ನಡುವಿನ ಬಿಕ್ಕಟ್ಟು ಮುಂದುವರಿದಂತಾಗಿತ್ತು.

- Advertisement -

Latest News

error: Content is protected !!