- Advertisement -
![]()
- Advertisement -
ಬೆಂಗಳೂರು : ರಾಜ್ಯ ಸರ್ಕಾರವು ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರೋಧಿಸಿ ಡಿಸೆಂಬರ್ 5 ರಂದು ಕನ್ನಡ ಪರ ಸಂಘಟನೆಗಳಿಂದ ಕರ್ನಾಟಕ ಬಂದ್ ಗೆ ಕರೆ ನೀಡಿವೆ.
ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ ಪರ ಸಂಘಟನೆಗಳ ಒಕ್ಕೂಟ ನಡೆಸಿದ ಪೂರ್ವಭಾವಿ ಸಭೆಯಲ್ಲಿ ಡಿಸೆಂಬರ್ 5 ರಂದು ಕರ್ನಾಟಕ ಬಂದ್ ಗೆ ಬೆಂಬಲ ನೀಡಿದ್ದು , ಡಿಸೆಂಬರ್ 5 ರಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಕರ್ನಾಟಕ ಬಂದ್ ಗೆ ಕನ್ನಡ ಪರ ಸಂಘಟನೆಗಳು ತೀರ್ಮಾನಿಸಿವೆ .
ಮುಖ್ಯಮಂತ್ರಿ ಬಿ .ಎಸ್.ಯಡಿಯೂರಪ್ಪ ಇತ್ತೀಚೆಗಷ್ಟೇ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಮರಾಠ ಪ್ರಾಧಿಕಾರ ರಚನೆಗೆ ವಿರೋಧಿಸಿ ಕನ್ನಡ ಪರ ಸಂಘಟನೆಗಳು ಡಿಸೆಂಬರ್ 5 ರಂದು ಕರ್ನಾಟಕ ಬಂದ್ ಮಾಡಲು ನಿರ್ಧರಿಸಿವೆ .
- Advertisement -


