Tuesday, May 21, 2024
Homeತಾಜಾ ಸುದ್ದಿಶಾಲೆಗಳ ಪುನರಾರಂಭದ ಬಗ್ಗೆ ನವೆಂಬರ್ 6 ರಂದು ನಿರ್ಧಾರ..

ಶಾಲೆಗಳ ಪುನರಾರಂಭದ ಬಗ್ಗೆ ನವೆಂಬರ್ 6 ರಂದು ನಿರ್ಧಾರ..

spot_img
- Advertisement -
- Advertisement -

ಬೆಂಗಳೂರು: ನವೆಂಬರ್ 17 ರಿಂದ ಈಗಾಗಲೇ ಪದವಿ ವಿದ್ಯಾರ್ಥಿಗಳಿಗೆ ತರಗತಿಗಳನ್ನು ಆರಂಭ ಮಾಡೋದಕ್ಕೆ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಇದರ ಮಧ್ಯೆ , ಪದವಿಪೂರ್ವ ಕಾಲೇಜು ಮತ್ತು ಶಾಲೆಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ನವೆಂಬರ್ 4 ರಿಂದ 6 ರವರೆಗೆ ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಪೋಷಕರೊಂದಿಗೆ ಸರಣಿ ಸಭೆಗಳನ್ನು ನಡೆಸಲಿದ್ದಾರೆ.

ನವೆಂಬರ್ 6 ರಂದು ಶಾಲೆಗಳನ್ನು ಆರಂಭಿಸುವ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಶಾಲೆಗಳಲ್ಲಿ ಮೂಲಸೌಕರ್ಯ ಸೇರಿದಂತೆ ಪುನಾರಂಭಕ್ಕೆ ಸಿದ್ಧತೆ ಪೂರ್ಣಗೊಳಿಸಿರುವ ಬಗ್ಗೆ ಶಿಕ್ಷಣ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳಲಿದ್ದಾರೆ. ಬಳಿಕ ಶಾಲೆ ಆರಂಭದ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎನ್ನಲಾಗಿದೆ.

- Advertisement -
spot_img

Latest News

error: Content is protected !!