Monday, May 6, 2024
Homeಕರಾವಳಿಮಂಗಳೂರು: ಬಿಲ್ಲವರಿಗೆ ಮೀಸಲಾತಿ ನೀಡುವಂತೆ ಆಗ್ರಹಿಸಿ ಬೃಹತ್‌ ಪಾದಯಾತ್ರೆ ನಡೆಸಲು ನಿರ್ಧಾರ

ಮಂಗಳೂರು: ಬಿಲ್ಲವರಿಗೆ ಮೀಸಲಾತಿ ನೀಡುವಂತೆ ಆಗ್ರಹಿಸಿ ಬೃಹತ್‌ ಪಾದಯಾತ್ರೆ ನಡೆಸಲು ನಿರ್ಧಾರ

spot_img
- Advertisement -
- Advertisement -

ಮಂಗಳೂರು: ಮೀಸಲಾತಿ ವಿಚಾರವೀಗ ರಾಜ್ಯದಲ್ಲಿ ಹೆಚ್ಚು ಸದ್ದು ಮಾಡ್ತಿದ್ದು, ಇದೀಗ ಈಡಿಗ-ಬಿಲ್ಲವ ಸಮುದಾಯವನ್ನು ಪ್ರವರ್ಗ 1ರಡಿ ಸೇರ್ಪಡೆಗೆ ಹಕ್ಕೊತ್ತಾಯ ಕೇಳಿ ಬಂದಿದೆ. ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೃಹತ್‌ ಪಾದಯಾತ್ರೆಯನ್ನೂ ಕೈಗೊಳ್ಳಲಾಗ್ತಿದೆ.

ಮಂಗಳೂರಿನ ಕುದ್ರೋಳಿ ದೇವಸ್ಥಾನದಲ್ಲಿ ಸಭೆ ಸೇರಿದ ಬಿಲ್ಲವ ಮುಖಂಡರು ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದ್ದಾರೆ. ದಕ್ಷಿಣಕನ್ನಡ, ಉಡುಪಿ ಜಿಲ್ಲೆಯಲ್ಲಿ ನಿರ್ಣಾಯಕವಾಗಿರೋ ಬಿಲ್ಲವ ವೋಟ್ ಬ್ಯಾಂಕ್ ಹಲವು ಬೇಡಿಕೆಗಳನ್ನು ಮುಂದಿಟ್ಟು ಈ ಸಮಾವೇಶ ನಡೆಸಲು ಸಜ್ಜಾಗಿದೆ.

ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿ ಪೀಠ ಕಲಬುರಗಿಯ ಪ್ರಣಾವಾನಂದ ಸ್ವಾಮೀಜಿ ಬೃಹತ್ ಪಾದಯಾತ್ರೆಯನ್ನು ಹಮ್ಮಿಕೊಂಡಿದ್ದಾರೆ. ಮಂಗಳೂರಿನ ಕುದ್ರೋಳಿ ದೇವಸ್ಥಾನದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‍ವರೆಗೆ ಸುಮಾರು 658 ಕಿ.ಮೀ ದೂರದ ಪಾದಯಾತ್ರೆಯನ್ನು ನಡೆಸಿ ಅಮರಣಾಂತ ಉಪವಾಸ ಸತ್ಯಾಗ್ರಹವನ್ನು ನಡೆಸಲಿದ್ದಾರೆ. ಜನವರಿ 6 ರಂದು ಈ ಪಾದಯಾತ್ರೆ ಆರಂಭವಾಗಲಿದ್ದು, ಒಟ್ಟು 35 ದಿನಗಳ ಕಾಲ ಈ ಪಾದಯಾತ್ರೆ ಸಾಗಲಿದೆ. ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಯಾತ್ರೆಗೆ ಚಾಲನೆ ನೀಡಲಿದ್ದಾರೆ.

- Advertisement -
spot_img

Latest News

error: Content is protected !!