Friday, May 17, 2024
Homeತಾಜಾ ಸುದ್ದಿಎಸ್​ಸಿ, ಎಸ್​ಟಿ ಮೀಸಲಾತಿ ಹೆಚ್ಚಳಕ್ಕೆ ತೀರ್ಮಾನ: ಶೀಘ್ರ ಅಧಿಸೂಚನೆ ಎಂದ ಸಿಎಂ ಬೊಮ್ಮಾಯಿ

ಎಸ್​ಸಿ, ಎಸ್​ಟಿ ಮೀಸಲಾತಿ ಹೆಚ್ಚಳಕ್ಕೆ ತೀರ್ಮಾನ: ಶೀಘ್ರ ಅಧಿಸೂಚನೆ ಎಂದ ಸಿಎಂ ಬೊಮ್ಮಾಯಿ

spot_img
- Advertisement -
- Advertisement -

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದವರಿಗೆ ಹೆಚ್ಚಿನ ಅವಕಾಶ ನೀಡಲು ಅನುಕೂಲವಾಗುವಂತೆ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು.

ನ್ಯಾಯಮೂರ್ತಿ ನಾಗಮೋಹನ್​ದಾಸ್ ನೇತೃತ್ವದ ಸಮಿತಿ ಸಲ್ಲಿಸಿರುವ ವರದಿಯ ಅನುಷ್ಠಾನ ಸಾಧ್ಯತೆಯ ಬಗ್ಗೆ ಸರ್ವಪಕ್ಷ ಸಭೆಯಲ್ಲಿ ಚರ್ಚಿಸಿದ ನಂತರ ಈ ತೀರ್ಮಾನ ಘೋಷಿಸಿದರು. ಅದರಂತೆ ಎಸ್​ಸಿ ವರ್ಗದ ಮೀಸಲಾತಿಯನ್ನು ಹಾಲಿ ಅಸ್ತಿತ್ವದಲ್ಲಿರುವ ಶೇ 15ರಿಂದ ಶೇ 17ಕ್ಕೆ ಹಾಗೂ ಎಸ್​ಟಿ ಮೀಸಲಾತಿಯನ್ನು ಹಾಲಿ ಅಸ್ತಿತ್ವದಲ್ಲಿರುವ ಶೇ 3ರಿಂದ 7ಕ್ಕೆ ಹೆಚ್ಚಳ ಮಾಡಲಾಗುವುದು. ಸರ್ವಪಕ್ಷ ಸಭೆಯ ನಿರ್ಣಯವನ್ನು ಸಚಿವ ಸಂಪುಟದಲ್ಲಿ ಇರಿಸಿ ಅಂಗೀಕಾರ ಪಡೆದುಕೊಂಡ ನಂತರ ಸರ್ಕಾರಿ ಆದೇಶ ಪ್ರಕಟವಾಗಲಿದೆ. ಮೀಸಲಾತಿ ಪ್ರಮಾಣ ಹೆಚ್ಚಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

- Advertisement -
spot_img

Latest News

error: Content is protected !!