Saturday, May 18, 2024
Homeತಾಜಾ ಸುದ್ದಿ“ದಿ ಕಾಶ್ಮೀರ್ ಫೈಲ್ಸ್” ಸಿನಿಮಾದಿಂದ ಪ್ರೇರಣೆಗೊಂಡ ಪುತ್ತೂರು ಅಂಬಿಕಾ ಶಿಕ್ಷಣ ಸಂಸ್ಥೆ: ಕಾಶ್ಮೀರಿ ಪಂಡಿತರ ಮಕ್ಕಳಿಗೆ...

“ದಿ ಕಾಶ್ಮೀರ್ ಫೈಲ್ಸ್” ಸಿನಿಮಾದಿಂದ ಪ್ರೇರಣೆಗೊಂಡ ಪುತ್ತೂರು ಅಂಬಿಕಾ ಶಿಕ್ಷಣ ಸಂಸ್ಥೆ: ಕಾಶ್ಮೀರಿ ಪಂಡಿತರ ಮಕ್ಕಳಿಗೆ ಉಚಿತ ಶಿಕ್ಷಣದ ಘೋಷಣೆ

spot_img
- Advertisement -
- Advertisement -

ಪುತ್ತೂರು: ಇತ್ತೀಚೆಗೆ ತೆರೆಕಂಡು ದೇಶಾದ್ಯಂತ ಭಾರೀ ಸಂಚಲನ ಸೃಷ್ಟಿಸಿದ್ದ ‘ದಿ ಕಾಶ್ಮೀರ ಫೈಲ್ಸ್’ ಸಿನಿಮಾದಿಂದ ಪ್ರೇರಣೆಗೊಂಡ ದ.ಕ.ಜಿಲ್ಲೆಯ ಪುತ್ತೂರಿನ ಅಂಬಿಕಾ ವಿದ್ಯಾಸಂಸ್ಥೆಯು ಕಾಶ್ಮೀರ ಪಂಡಿತರ ಮಕ್ಕಳಿಗೆ ಉಚಿತ ಶಿಕ್ಷಣ ನೀಡುವುದಾಗಿ ಆಫರ್ ಕೊಟ್ಟಿದೆ.

ಪುತ್ತೂರಿನ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಈ ಬಗ್ಗೆ ಜಮ್ಮುವಿನಲ್ಲಿಯೇ ಸುದ್ದಿಗೋಷ್ಠಿ ನಡೆಸಿ ಅಲ್ಲಿನ ಕಾಶ್ಮೀರಿ ಪಂಡಿತರಿಗೆ ಮಾಹಿತಿ ನೀಡಿದ್ದಾರೆ. ನಟ್ಟೋಜ ಫೌಂಡೇಶನ್ ಟ್ರಸ್ಟ್ ನ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಯ ವತಿಯಿಂದ ಕಾಶ್ಮೀರದಲ್ಲಿ ದೌರ್ಜನ್ಯಕ್ಕೊಳಗಾಗಿರುವ ಪಂಡಿತರ ಮಕ್ಕಳಿಗೆ ಉಚಿತ ವಸತಿ ಸಹಿತ ಶಿಕ್ಷಣವನ್ನು ಘೋಷಿಸಿದೆ. 6 ನೇ ತರಗತಿಯಿಂದ ಪದವಿಯ ಹಂತದವರೆಗೆ ಯಾವುದೇ ತರಗತಿಯಲ್ಲಿ ಓದಲು ಬಯಸುವ ಕಾಶ್ಮೀರ ಪಂಡಿತರ ಮಕ್ಕಳಿಗೆ ಈ ಉಚಿತ ಸೌಲಭ್ಯ ಲಭ್ಯವಾಗಲಿದೆ.

ಈ ಬಗ್ಗೆ ಪುತ್ತೂರಿನ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ, ಈಗಾಗಲೇ ಕಾಶ್ಮೀರಿ ಪಂಡಿತರ ನಾಲ್ಕು ಮಂದಿ ಮಕ್ಕಳು ನಮ್ಮ ಶಾಲೆಯಲ್ಲಿ ಉಚಿತ ಶಿಕ್ಷಣದಡಿ ದಾಖಲಾಗಿದ್ದಾರೆ. ಮುಂದಿನ ಶೈಕ್ಷಣಿಕ ವರ್ಷದಿಂದ ಅವರು ನಮ್ಮ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಜನೆ ಮಾಡಲಿದ್ದಾರೆ ಎಂದು ತಿಳಿಸಿದರು.

- Advertisement -
spot_img

Latest News

error: Content is protected !!