Wednesday, May 1, 2024
Homeತಾಜಾ ಸುದ್ದಿಮೇ.10 ರಂದು ವಿಧಾನಸಭೆ ಚುನಾವಣೆ ಹಿನ್ನೆಲೆ ಸಾರ್ವತ್ರಿಕ ರಜೆ ಘೋಷಣೆ

ಮೇ.10 ರಂದು ವಿಧಾನಸಭೆ ಚುನಾವಣೆ ಹಿನ್ನೆಲೆ ಸಾರ್ವತ್ರಿಕ ರಜೆ ಘೋಷಣೆ

spot_img
- Advertisement -
- Advertisement -

ಬೆಂಗಳೂರು: ಮೇ.10 ರಂದು ವಿಧಾನಸಭೆ ಚುನಾವಣೆ ಹಿನ್ನೆಲೆ ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ.ಕೇಂದ್ರ ಮತ್ತು ರಾಜ್ಯ ಸರ್ಕಾರಿ ಕಚೇರಿಗಳಿಗೆ, ಶಾಲಾ-ಕಾಲೇಜುಗಳಿಗೆ, ಸಂಘ-ಸಂಸ್ಥೆಗಳಿಗೆ ಹಾಗೂ ಖಾಸಗಿ ಸಂಸ್ಥೆಗಳಿಗೆ ಸಾರ್ವತ್ರಿಕ ರಜೆಯನ್ನು ಘೋಷಣೆ ಮಾಡಲಾಗಿದೆ.

ಈ ಸಂಬಂಧ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ಕರ್ನಾಟಕ ವಿಧಾನಸಭಾ ಚುನಾವಣೆಗೆ ಮೇ.10ರಂದು ಮತದಾನ ನಡೆಯಲಿದೆ. ಮತ ಚಲಾಯಿಸಲು ಅನುಕೂಲವಾಗುವಂತೆ ಆಯಾ ಮತ ಕ್ಷೇತ್ರಗಳ ಎಲ್ಲಾ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಕಚೇರಿಗಳಿಗೆ, ಶಾಲಾ ಕಾಲೇಜುಗಳಿಗೆ, ವಿವಿಧ ಸಂಘ ಸಂಸ್ಥೆಗಳಿಗೆ ಮತ್ತು ಖಾಸಗಿ ಸಂಸ್ಥೆಗಳಿಗೆ ಅಂದರೆ ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ ಸರ್ಕಾರವು ಆಯಾ ಚುನಾವಣಾ ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲು ದಿನಾಂಕದಂದು ಸಾರ್ವತ್ರಿಕ ರಜೆಯನ್ನು ಘೋಷಿಸಿದೆ. ಈ ರಜೆಯು ತುರ್ತು ಸೇವೆಗಳಿಗೆ ಅನ್ವಯಿಸುವುದಿಲ್ಲ ಎಂದಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಚುನಾವಣಾ ಕಾರ್ಯಗಳಿಗೆ ನಿಯೋಜಿಸಲ್ಪಟ್ಟ ಎಲ್ಲಾ ಸರ್ಕಾರಿ ನೌಕರರುಗಳು ಚುನಾವಣಾ ಕರ್ತವ್ಯಕ್ಕೆ  ಹಾಜರಾಗತಕ್ಕದ್ದು. ಈ ಕ್ಷೇತ್ರಗಳಲ್ಲಿ ಮತದಾನವು ಸುಸೂತ್ರವಾಗಿ ನಡೆಯಲು ಅನುಕೂಲವಾಗುವಂತೆ ಮತದಾನ ನಡೆಯುವ ಮತಗಟ್ಟೆಯನ್ನು ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಶಾಲೆಗಳಲ್ಲಿ ಸ್ಥಾಪಿಸಿದ್ಧಲ್ಲಿ ಅಂತಹ ಕಚೇರಿ ಹಾಗೂ ಶಾಲೆಗಳಿಗೆ ದಿನಾಂಕ 09-05-2023ರ ಮಂಗಳವಾರದಂದು ಹಾಗೂ ಮತಏಣಿಕೆ ನಡೆಯುವ ದಿನಾಂಕ 13-05-2023ರಂದು ಮತ ಏಣಿಕೆ ನಡೆಯುವ ಕೇಂದ್ರಗಳಲ್ಲಿ ಮಾತ್ರ ರಜೆ ಘೋಷಿಸುವ ಅವಶ್ಯಕತೆ ಇದ್ದಲ್ಲಿ ಸಂಬಂಧ ಪಟ್ಟ ಚುನಾವಣಾಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

- Advertisement -
spot_img

Latest News

error: Content is protected !!