Sunday, June 7, 2026
Homeತಾಜಾ ಸುದ್ದಿಕರಕುಶಲ ಅಭಿವೃದ್ಧಿ ನಿಗಮದ ಎಂಡಿ ರೂಪಾ ಮೌದ್ಗಿಲ್ ವಿರುದ್ಧ ಮಾನನಷ್ಟ ‌ಮೊಕದ್ದಮೆ: ನಿಗಮದ ಅಧ್ಯಕ್ಷ ಬೇಳೂರು...

ಕರಕುಶಲ ಅಭಿವೃದ್ಧಿ ನಿಗಮದ ಎಂಡಿ ರೂಪಾ ಮೌದ್ಗಿಲ್ ವಿರುದ್ಧ ಮಾನನಷ್ಟ ‌ಮೊಕದ್ದಮೆ: ನಿಗಮದ ಅಧ್ಯಕ್ಷ ಬೇಳೂರು ರಾಘವೇಂದ್ರ ಶೆಟ್ಟಿ ಎಚ್ಚರಿಕೆ

- Advertisement -
- Advertisement -

ಬೆಂಗಳೂರು: ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕಿ‌ ನಡುವಿನ ಜಗಳ ತಾರಕಕ್ಕೇರಿದೆ. ತಮ್ಮ ವಿರುದ್ಧ ಮಾಡಿರುವ ಆರೋಪಗಳಿಗೆ ಎರಡು ದಿನಗಳಲ್ಲಿ ದಾಖಲೆಗಳನ್ನು ಒದಗಿಸದಿದ್ದಲ್ಲಿ ಒಂದು ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಬೇಳೂರು ರಾಘವೇಂದ್ರ ಶೆಟ್ಟಿ ಅವರು ನಿಗಮದ ಎಂಡಿ ರೂಪಾ ಮೌದ್ಗಿಲ್ ಅವರಿಗೆ ಪತ್ರ ಬರೆದಿದ್ದಾರೆ.

ಅಧ್ಯಕ್ಷ ಬೇಳೂರು ರಾಘವೇಂದ್ರ ಶೆಟ್ಟಿ ನಿಗಮದ ಶೋ ರೂಂಗಳಿಂದ ಹಣ ಪಾವತಿಸದೇ ಮೂರು ಲಕ್ಷಕ್ಕೂ ಹೆಚ್ಚು ಮೌಲ್ಯದ ವಸ್ತುಗಳನ್ನು ತೆಗೆದುಕೊಂಡು ಹೋಗಿದ್ದಾರೆ ಮತ್ತು ಸಿಬ್ಬಂದಿಯೋರ್ವರ ನೇಮಕಾತಿಯಲ್ಲಿ ನಾಲ್ಕು ಕೋಟಿ ರೂಪಾಯಿಯಷ್ಟು ಅವ್ಯವಹಾರ ನಡೆಸಿದ್ದಾರೆ ಎಂದು ಎಂಡಿ ರೂಪಾ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರದ ಮೂಲಕ ದೂರು ನೀಡಿದ್ದರು.

ಈ ಎರಡು ಆರೋಪಗಳಿಗೆ ಎರಡು ದಿನಗಳಲ್ಲಿ ಸೂಕ್ತ ದಾಖಲೆ ಒದಗಿಸದಿದ್ದರೆ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ನಿಗಮ ಅಧ್ಯಕ್ಷ ಬೇಳೂರು ರಾಘವೇಂದ್ರ ಶೆಟ್ಟಿ ಪತ್ರ ಬರೆದಿದ್ದಾರೆ.

- Advertisement -

Latest News

error: Content is protected !!