Monday, June 8, 2026
Homeಚಿಕ್ಕಮಗಳೂರುಚಿಕ್ಕಮಗಳೂರಿನಲ್ಲಿ Rss ಚಡ್ಡಿಗೆ ಧಿಕ್ಕಾರ, ಬಿಜೆಪಿಗೆ ಧಿಕ್ಕಾರ ಘೋಷಣೆ; ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು ಹಾಗೂ ಮುಖಂಡರಿಂದ...

ಚಿಕ್ಕಮಗಳೂರಿನಲ್ಲಿ Rss ಚಡ್ಡಿಗೆ ಧಿಕ್ಕಾರ, ಬಿಜೆಪಿಗೆ ಧಿಕ್ಕಾರ ಘೋಷಣೆ; ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು ಹಾಗೂ ಮುಖಂಡರಿಂದ ಪ್ರತಿಭಟನೆ

- Advertisement -
- Advertisement -

ಚಿಕ್ಕಮಗಳೂರು  : ಚಿಕ್ಕಮಗಳೂರು ನಗರದ ಅಜಾದ್ ಪಾರ್ಕ್ ವೃತ್ತದಲ್ಲಿ ಸೇರಿದ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು ಹಾಗೂ ಮುಖಂಡರು ಬಿಜೆಪಿ ಸರ್ಕಾರದ ವಿರುದ್ದ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಗಣವೇಶದ ಭಾಗವಾದ  ಚಡ್ಡಿಯನ್ನು ಸುಟ್ಟು ಹಾಕಿ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಿ Rss ಚಡ್ಡಿಗೆ ಧಿಕ್ಕಾರ, ಬಿಜೆಪಿಗೆ ಧಿಕ್ಕಾರ ಎಂಬ ಘೋಷಣೆಗಳನ್ನು ಕೂಗುತ್ತಾ, NSUI ರಾಜ್ಯಾಧ್ಯಕ್ಷರ ಬಂಧನವನ್ನು ಖಂಡಿಸುತ್ತೇವೆ ಇದನ್ನು  ನಾವು ಒಪ್ಪಲಾರೆವು ಎಂದು ಹೇಳಿದರು. 

ಇನ್ನೂ ಪ್ರತಿಕೃತಿ ದಹಿಸಿದ ಪ್ರತಿಭಟನಾಕಾರರು ವಿದ್ಯಾರ್ಥಿಗಳನ್ನು ಸಹಿಸಿದ ಪಕ್ಷ ಬಿಜೆಪಿ, NSUI ರಾಜ್ಯಾಧ್ಯಕ್ಷ ಹಾಗೂ ಕಾರ್ಯಕರ್ತರ ಬಂಧನಕ್ಕೆ ನಮ್ಮ ವಿರೋಧವಿದೆ ಈ ನಡೆಯನ್ನು ನಾವು ಒಪ್ಪಲಾರೆವು ಎಂದರು. ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್ ನ ಪ್ರಮುಖರಾದ ಡಾ. ಕೆಪಿ ಅಂಶುಮಂಥ್, ಹಾಗೂ ಇತರೆ ಪದಾಧಿಕಾರಿಗಳು ಹಾಜರಿದ್ದರು.

- Advertisement -

Latest News

error: Content is protected !!