Thursday, June 4, 2026
Homeಕರಾವಳಿಉಡುಪಿಅಡಿಕೆಗೆ ಎಲೆ ಚುಕ್ಕಿ ರೋಗ ಬಾಧೆ ಹಿನ್ನೆಲೆ ; ಸಂತ್ರಸ್ಥ ಅಡಿಕೆ ಬೆಳೆಗಾರರಿಗೆ ವಿಶೇಷ ಆರ್ಥಿಕ...

ಅಡಿಕೆಗೆ ಎಲೆ ಚುಕ್ಕಿ ರೋಗ ಬಾಧೆ ಹಿನ್ನೆಲೆ ; ಸಂತ್ರಸ್ಥ ಅಡಿಕೆ ಬೆಳೆಗಾರರಿಗೆ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯ.

- Advertisement -
- Advertisement -

ನವದೆಹಲಿ: ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕರಾವಳಿ ಭಾಗದಲ್ಲಿ ರೈತ ಸಮುದಾಯದ ಜೀವನಾಡಿಯಾಗಿರುವ ಅಡಿಕೆ ಬೆಳೆ ಎಲೆ ಚುಕ್ಕೆ ರೋಗದಿಂದ ನಲುಗಿರುವ ಬಗ್ಗೆ ಕೇಂದ್ರ ಸರ್ಕಾರದ ಗಮನ ಸೆಳೆಯಲಾಗಿದೆ.

ರಾಜ್ಯದ ನಿಯೋಗ ಇಂದು ನವದೆಹಲಿಯಲ್ಲಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರನ್ನು ಭೇಟಿಯಾಗಿ ಎಲೆ ಚುಕ್ಕಿ ರೋಗದ ನಿಯಂತ್ರಣ ಸಂಬಂಧ ಮನವಿ ಸಲ್ಲಿಸಿದೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಗೃಹ ಸಚಿವ ಆರಗ ಜ್ಞಾನೇಂದ್ರ, ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಸಾಗರ ಶಾಸಕ ಹರತಾಳು ಹಾಲಪ್ಪ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ ಪಿ.ವಿ. ಕೃಷ್ಣ ಭಟ್ ನಿಯೋಗದಲ್ಲಿ ಪಾಲ್ಗೊಂಡಿದ್ದರು.

ಕರ್ನಾಟಕಕ್ಕೆ ಕೂಡಲೇ ಎಲೆ ಚುಕ್ಕಿ ರೋಗದ ಅಧ್ಯಯನ ಮಾಡಲು ವಿಜ್ಞಾನಿಗಳ ತಂಡ ಕಳುಹಿಸುವಂತೆ ಮತ್ತು ಸಂತ್ರಸ್ಥ ರೈತರಿಗೆ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡುವಂತೆ ನಿಯೋಗ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದೆ.

- Advertisement -

Latest News

error: Content is protected !!