- Advertisement -
![]()
- Advertisement -
ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ ಕುಸ್ತಿಪಟು ವಿನೇಶ್ ಫೋಗಟ್ ಅವರನ್ನು ‘ಅನರ್ಹ’ಗೊಳಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ಕ್ರಮವನ್ನು ದಿಲ್ಲಿ ಹೈಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.
ತಾಯಿಯಾದ ಬಳಿಕ ಕ್ರೀಡಾಂಗಣಕ್ಕೆ ಮರಳಲು ಬಯಸುತ್ತಿರುವ ಫೋಗಟ್ ಅವರ ಸಾಮರ್ಥ್ಯವನ್ನು ಮೌಲ್ಯಮಾಪನ ಮಾಡಲು ತಜ್ಞರ ಸಮಿತಿಯೊಂದನ್ನು ರಚಿಸುವಂತೆ ಕೇಂದ್ರ ಸರ್ಕಾರಕ್ಕೆ ನ್ಯಾಯಾಲಯ ಸೂಚಿಸಿದೆ. ಅಲ್ಲದೆ, ಮುಂಬರುವ ಏಷ್ಯನ್ ಕ್ರೀಡಾಕೂಟದ ಆಯ್ಕೆ ಟ್ರಯಲ್ಸ್‌ನಲ್ಲಿ ಅವರು ಭಾಗವಹಿಸುವುದನ್ನು ಖಚಿತಪಡಿಸಬೇಕು ಎಂದು ಮುಖ್ಯ ನ್ಯಾಯಮೂರ್ತಿ ಡಿ.ಕೆ. ಉಪಾಧ್ಯಾಯ ಹಾಗೂ ನ್ಯಾಯಮೂರ್ತಿ ತೇಜಸ್ ಕರಿಯಾ ಅವರಿದ್ದ ಪೀಠವು ಆದೇಶಿಸಿದೆ.
ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಫೋಗಟ್ ಅನರ್ಹಗೊಂಡಿದ್ದನ್ನು ‘ರಾಷ್ಟ್ರೀಯ ಅವಮಾನ’ ಎಂದು ಕರೆದ ನ್ಯಾಯಾಲಯ, ಅವರ ವಿರುದ್ಧವೇ ನಿಯಮಗಳನ್ನು ಬದಲಾಯಿಸಲಾಗುತ್ತಿದೆ ಎಂಬ ಅನುಮಾನ ವ್ಯಕ್ತಪಡಿಸಿ ವಿಚಾರಣೆಯನ್ನು ಮುಂದೂಡಿದೆ.
- Advertisement -


