- Advertisement -
- Advertisement -
ಉಡುಪಿ: ದೆಹಲಿಯ ನಿಜಾಮುದ್ದೀನ್ ಮಸೀದಿಯಲ್ಲಿ ಮಾರ್ಚ್ 13 ರಿಂದ 15 ರವರೆಗೆ ಮುಸ್ಲಿಂ ಸಮುದಾಯದ ಧಾರ್ಮಿಕ ಸಭೆಯಲ್ಲಿ ಉಡುಪಿ ಜಿಲ್ಲೆಯಿಂದ ಯಾರು ಕೂಡ ಭಾಗವಹಿಸಿಲ್ಲ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಸ್ಪಷ್ಟನೆ ನೀಡಿದ್ದಾರೆ.
ರಾಜ್ಯದ ಪ್ರಮುಖ ಟಿವಿ ಮಾಧ್ಯಮಗಳಲ್ಲಿ ಜಿಲ್ಲೆಯಿಂದ 16 ಮಂದಿ ಭಾಗವಹಿಸಿದ್ದಾರೆ ಎಂಬ ಸುದ್ದಿ ಬರುತ್ತಿದ್ದು, ಇದು ಸಂಪೂರ್ಣ ಸುಳ್ಳಾಗಿದೆ. ಹಾಗಾಗಿ ಜಿಲ್ಲೆಯ ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ಡಿಸಿ ತಿಳಿಸಿದ್ದಾರೆ.
ಆದರೆ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ಮುಸ್ಲಿಂ ಧಾರ್ಮಿಕ ಮುಖಂಡರು ದೆಹಲಿಯ ಧಾರ್ಮಿಕ ಸಮಾವೇಶದಲ್ಲಿ ಭಾಗವಹಿಸಿದ್ದರು. ಅವರನ್ನು ಕೊರೋನಾ ಪ್ರಾಥಮಿಕ ತಪಾಸಣೆಗೆ ಜಿಲ್ಲಾ ಆಸ್ಪತ್ರೆ ವೆನ್ಲಾಕ್ ಗೆ ದಾಖಲಿಸಲಾಗಿದೆ.
- Advertisement -