Sunday, June 7, 2026
Homeತಾಜಾ ಸುದ್ದಿತೇಜಸ್ವಿ ಸೂರ್ಯರನ್ನು ವಿಚಾರಣೆ ಮಾಡಿದ ದೆಹಲಿ ಪೊಲೀಸರು

ತೇಜಸ್ವಿ ಸೂರ್ಯರನ್ನು ವಿಚಾರಣೆ ಮಾಡಿದ ದೆಹಲಿ ಪೊಲೀಸರು

- Advertisement -
- Advertisement -

ದೆಹಲಿ: ಭಾರತೀಯ ಜನತಾ ಪಕ್ಷದ ಸಂಸದ ಹಾಗೂ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಅವರನ್ನು ದೆಹಲಿ ಪೊಲೀಸರು ವಿಚಾರಣೆ ನಡೆಸಿದ್ದಾರೆ.


ಮಾರ್ಚ್ 30 ರಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜಿವಾಲ್ ಅವರ ಮನೆ ಮುಂದೆ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ವಿಚಾರಣೆ ಮಾಡಿದ್ದಾರೆ.
ಕಾಶ್ಮೀರ್ ಫೈಲ್ಸ್ ಕುರಿತು ಕೇಜಿವಾಲ್ ಹೇಳಿಕೆ ಖಂಡಿಸಿ ಪ್ರತಿಭಟನೆ ನಡೆಸಿದ್ದರು. ಸಿಎಂ ಮನೆಯ ಮುಂದೆ ಹಾಕಿದ್ದ ಬ್ಯಾರಿಕೇಡ್‌ಗಳನ್ನು ಮುರಿದು ಒಳ ಹೋಗಲು ಯತ್ನಿಸಿ, ಸಿಸಿಟಿವಿ ಪೀಠೋಪಕರಣಗಳನ್ನು ಧ್ವಂಸ ಮಾಡಿದ್ದರು.


ಹೀಗಾಗಿ ಅಶೋಕ ರಸ್ತೆಯಲ್ಲಿರುವ ತೇಜಸ್ವಿ ಸೂರ್ಯರ ಸರ್ಕಾರಿ ಮನೆಯಲ್ಲಿ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ವಿಚಾರಣೆ ವೇಳೆ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರು ಮುಖ್ಯಮಂತ್ರಿ ನಿವಾಸದ ಹೊರಗೆ ಪ್ರತಿಭಟನೆ ನಡೆಸುತ್ತಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ತೋರಿಸಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

- Advertisement -

Latest News

error: Content is protected !!