Friday, June 26, 2026
Homeಕ್ರೀಡೆಆರ್‌ಸಿಬಿ ವಿರುದ್ಧ ಟಾಸ್ ಗೆದ್ದ ಡೆಲ್ಲಿ; ಬ್ಯಾಟಿಂಗ್ ಆಯ್ಕೆ

ಆರ್‌ಸಿಬಿ ವಿರುದ್ಧ ಟಾಸ್ ಗೆದ್ದ ಡೆಲ್ಲಿ; ಬ್ಯಾಟಿಂಗ್ ಆಯ್ಕೆ

- Advertisement -
- Advertisement -

ಮಹಿಳಾ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಡೆಲ್ಲಿ ಕ್ಯಾಪಿಟಲ್ಸ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.

ಡೆಲ್ಲಿ ಕ್ಯಾಪಿಟಲ್ಸ್ ನಾಯಕಿ ಮೆಗ್‌ ಲ್ಯಾನಿಂಗ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ. ಇನ್ನು ಇದೇ ಮೊದಲ ಬಾರಿ ಫೈನಲ್‌ಗೆ ಪ್ರವೇಶಿಸಿರುವ ಆರ್‌ಸಿಬಿ, ಪ್ರಶಸ್ತಿ ಜಯದ ಕನಸು ಕಾಣುತ್ತಿದೆ. ಸ್ಮೃತಿ ಮಂದಾನ ಬಳಗವು ಪ್ಲೇ-ಆಫ್‌ನ ಎಲಿಮಿನೇಟರ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸಿ ಫೈನಲ್‌ಗೆ ಪ್ರವೇಶಿಸಿತ್ತು. ಲೀಗ್ ಹಂತದ ಎರಡೂ ಪಂದ್ಯಗಳಲ್ಲಿ ಮಂದಾನ ಬಳಗವು ಡೆಲ್ಲಿಗೆ ಮಣಿದಿತ್ತು.

- Advertisement -

Latest News

error: Content is protected !!