Monday, June 8, 2026
Homeಕರಾವಳಿಅಡಿಕೆ ಎಲೆ ಚುಕ್ಕಿ ರೋಗ ಹಿನ್ನೆಲೆ: ನಾಳೆ ಗೃಹ ಸಚಿವರ ನೇತೃತ್ವದಲ್ಲಿ ದೆಹಲಿಗೆ ನಿಯೋಗ

ಅಡಿಕೆ ಎಲೆ ಚುಕ್ಕಿ ರೋಗ ಹಿನ್ನೆಲೆ: ನಾಳೆ ಗೃಹ ಸಚಿವರ ನೇತೃತ್ವದಲ್ಲಿ ದೆಹಲಿಗೆ ನಿಯೋಗ

- Advertisement -
- Advertisement -

ಬೆಂಗಳೂರು: ಅಡಿಕೆ ಬೆಳೆಗೆ ಎಲೆ ಚುಕ್ಕೆ ರೋಗ ಬಾಧೆ ಹಾವಳಿ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಗಮನ ಸೆಳೆಯಲು ನಾಳೆ ದೆಹಲಿಗೆ ರಾಜ್ಯ ಸರ್ಕಾರದ ನಿಯೋಗ ತೆರಳಲಿದೆ.

ಗೃಹ ಸಚಿವ ಮತ್ತು ರಾಜ್ಯ ಅಡಿಕೆ ಕಾರ್ಯಪಡೆ ಅಧ್ಯಕ್ಷ ಆರಗ ಜ್ಞಾನೇಂದ್ರ ನೇತೃತ್ವದಲ್ಲಿ ತೆರಳಲಿರುವ ನಿಯೋಗ, ದೆಹಲಿಯಲ್ಲಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹಾಗೂ ಇತರರನ್ನು ಭೇಟಿಯಾಗಲಿದೆ.

ಎಲೆ ಚುಕ್ಕೆ ರೋಗದ ನಿಯಂತ್ರಣ ಬಗ್ಗೆ ಸಂಶೋಧನೆ, ರೈತರಿಗೆ ಪರಿಹಾರ ಹಾಗೂ ಇತರ ಮಾರ್ಗೋಪಾಯಗಳನ್ನು ಕಂಡುಕೊಳ್ಳುವ ಬಗ್ಗೆ ನಿಯೋಗ ಕೇಂದ್ರ ಕೃಷಿ ಸಚಿವರ ಜೊತೆ ಚರ್ಚಿಸಲಿದೆ.

ನಿಯೋಗದಲ್ಲಿ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಮತ್ತು ಸಾಗರ ಶಾಸಕ ಹರತಾಳು ಹಾಲಪ್ಪ ಸೇರಿದಂತೆ ಇತರರು ಪಾಲ್ಗೊಳ್ಳಲಿದ್ದಾರೆ.

- Advertisement -

Latest News

error: Content is protected !!