Saturday, June 27, 2026
Homeತಾಜಾ ಸುದ್ದಿಆಮ್‌ ಆದ್ಮಿ ಪಕ್ಷದ ಮಾನ್ಯತೆ ರದ್ಧತಿಗೆ ಆಗ್ರಹ: 56 ನಿವೃತ್ತ ಅಧಿಕಾರಿಗಳಿಂದ ಚುನಾವಣಾ ಆಯೋಗಕ್ಕೆ ಪತ್ರ

ಆಮ್‌ ಆದ್ಮಿ ಪಕ್ಷದ ಮಾನ್ಯತೆ ರದ್ಧತಿಗೆ ಆಗ್ರಹ: 56 ನಿವೃತ್ತ ಅಧಿಕಾರಿಗಳಿಂದ ಚುನಾವಣಾ ಆಯೋಗಕ್ಕೆ ಪತ್ರ

- Advertisement -
- Advertisement -

ನವದೆಹಲಿ: ಸರ್ಕಾರಿ ಅಧಿಕಾರಿಗಳು ತನ್ನ ಪಕ್ಷದ ಪರವಾಗಿ ಕೆಲಸ ಮಾಡುವಂತೆ ಆಮಿಷ ಒಡ್ಡಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಕಾರಣಕ್ಕೆ ಆಮ್ ಆದ್ಮಿ ಪಕ್ಷದ ಮಾನ್ಯತೆಯನ್ನು ರದ್ದುಗೊಳಿಸುವಂತೆ ಕೋರಿ ನಿವೃತ್ತ ಸರ್ಕಾರಿ ಅಧಿಕಾರಿಗಳ ಗುಂಪೊಂದು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದೆ.

ಸಾರ್ವಜನಿಕರ ಸೇವೆಯಲ್ಲಿ ತೊಡಗಿರುವ ಅಧಿಕಾರಿಗಳನ್ನು ಗುಜರಾತ್‌ ಚುನಾವಣೆಯಲ್ಲಿ ತೊಡಗಿಸಿಕೊಳ್ಳುವಂತೆ ಅರವಿಂದ್‌ ಕೇಜ್ರಿವಾಲ್‌ ಬಹಿರಂಗ ಕರೆ ಕೊಟ್ಟಿದ್ದು ನೀತಿ ಸಂಹಿತೆ ಉಲ್ಲಂಘನೆಯಾಗಿದೆ. ಹೀಗಾಗಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ 56 ನಿವೃತ್ತ ಅಧಿಕಾರಿಗಳು ಗುರುವಾರ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.

- Advertisement -

Latest News

error: Content is protected !!