Saturday, November 28, 2026
Homeಕರಾವಳಿಧರ್ಮಸ್ಥಳ ಅಸಹಜ ಸಾವು ಪ್ರಕರಣಗಳ ಮರುತನಿಖೆಗೆ ಆಗ್ರಹ | ನ.30ರಿಂದ ಮಂಗಳೂರಿನಲ್ಲಿ ಮೂರು ದಿನ ಸತ್ಯಾಗ್ರಹ

ಧರ್ಮಸ್ಥಳ ಅಸಹಜ ಸಾವು ಪ್ರಕರಣಗಳ ಮರುತನಿಖೆಗೆ ಆಗ್ರಹ | ನ.30ರಿಂದ ಮಂಗಳೂರಿನಲ್ಲಿ ಮೂರು ದಿನ ಸತ್ಯಾಗ್ರಹ

- Advertisement -
- Advertisement -

ಮಂಗಳೂರು: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಅಸಹಜ ಸಾವುಗಳ ಪ್ರಕರಣಗಳನ್ನು ಮರುತನಿಖೆ ನಡೆಸುವಂತೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಮಂಗಳೂರಿನಲ್ಲಿ ಮೂರು ದಿನಗಳ ಸತ್ಯಾಗ್ರಹಕ್ಕೆ ನಿರ್ಧರಿಸಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೋರಾಟಗಾರ ಜಯಂತ್ ಟಿ., ನವೆಂಬರ್ 30ರಿಂದ ಮಿನಿ ವಿಧಾನಸೌಧದ ಎದುರಿನ ಕ್ಲಾಕ್ ಟವರ್ ಬಳಿ ಮೂರು ದಿನಗಳ ಕಾಲ ಧರಣಿ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

1998ರಿಂದ 2015ರ ಅವಧಿಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಟ್ಟು 1,510 ಅಸಹಜ ಸಾವುಗಳು ಸಂಭವಿಸಿರುವುದಾಗಿ ಎಸ್‌ಐಟಿ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಈ ಎಲ್ಲಾ ಪ್ರಕರಣಗಳ ಕುರಿತು ಸಮಗ್ರ ತನಿಖೆ ನಡೆಸಲು ಎಸ್‌ಐಟಿಗೆ ಹೆಚ್ಚಿನ ಅಧಿಕಾರ ನೀಡಬೇಕು ಎಂದು ಹೋರಾಟಗಾರರು ಒತ್ತಾಯಿಸಿದ್ದಾರೆ.

ತಮ್ಮ ಬೇಡಿಕೆಗಳಿಗೆ ರಾಜ್ಯ ಸರ್ಕಾರ ಸ್ಪಂದಿಸದಿದ್ದರೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ ಜಯಂತ್ ಟಿ. ಎಚ್ಚರಿಕೆ ನೀಡಿದ್ದಾರೆ.

- Advertisement -

Latest News

error: Content is protected !!