Friday, May 17, 2024
Homeಅಪರಾಧಪುತ್ತೂರು: ಉದ್ಯಮಿಯೊಬ್ಬರಿಗೆ ಹಣದ ಬೇಡಿಕೆ ಇಟ್ಟು ಬೆದರಿಕೆ ಕರೆ- ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ

ಪುತ್ತೂರು: ಉದ್ಯಮಿಯೊಬ್ಬರಿಗೆ ಹಣದ ಬೇಡಿಕೆ ಇಟ್ಟು ಬೆದರಿಕೆ ಕರೆ- ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ

spot_img
- Advertisement -
- Advertisement -

ಪುತ್ತೂರು: ಉದ್ಯಮಿಯೊಬ್ಬರಿಗೆ ಹಣದ ಬೇಡಿಕೆ ಇಟ್ಟು, ಬೆದರಿಕೆ ಕರೆ ಮಾಡಿ, ಹಣ ವಸೂಲಿ ಮಾಡಿದ ಇಬ್ಬರು ರೌಡಿ ಶೀಟರ್’ಗಳನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕಲಂದರ್ ಶರೀಫ್ ಶಾಫ್ರಿ ಮತ್ತು ಹಸನಬ್ಬ ಹಸನ್ ಅಚ್ಚು ಅಚುನ್ ಎನ್ನಲಾಗಿದೆ.

ಶರೀಫ್ ಮತ್ತು ಹಸನಬ್ಬ ಪುತ್ತೂರಿನ ಉದ್ಯಮಿಯೊಬ್ಬರಿಗೆ ಕರೆ ಮಾಡಿ ಯಾರೋ ಒಬ್ಬ ವ್ಯಕ್ತಿ ಜೈಲಿನಲ್ಲಿದ್ದಾನೆ, ಅವನನ್ನು ಬಿಡಿಸಲು ಹಣ ಬೇಕು, ಅವನನ್ನು ಬಿಡಿಸಲು 13,00,000/- ತಗಲುತ್ತದೆ. ಅವನನ್ನು ಬಿಡಿಸಲು ನೀನು ಹಣ ಕೊಡಬೇಕು, ನೀನು 2 ದಿನದ ಒಳಗೆ 3,50,000/- ಹಣ ರೆಡಿ ಮಾಡಬೇಕು, ಇಲ್ಲದಿದ್ದರೆ ನಿನ್ನನ್ನು ಮತ್ತು ನಿನ್ನ ಮಕ್ಕಳನ್ನು ಜೀವ ಸಹಿತ ಬಿಡುವುದಿಲ್ಲ. ನಿನ್ನ ಮಕ್ಕಳ ಜೀವನ ಹಾಳು ಮಾಡುತ್ತೇನೆ. ಈ ವಿಚಾರವನ್ನು ಇತರರಲ್ಲಿ ತಿಳಿಸಿದರೆ ನಿನ್ನ ಹೆಣ ಖಂಡಿತ ಬೀಳುತ್ತದೆ, ನೀನು ಜೀವಂತ ಬದುಕಲು ಸಾಧ್ಯವಿಲ್ಲ’ ಎಂದು ಜೀವ ಬೆದರಿಕೆ ಒಡ್ಡಿರುವ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇದೀಗ ಇಬ್ಬರು ರೌಡಿ ಶೀಟರ್ ಗಳನ್ನು ಬಂಧಿಸಿ, ಉದ್ಯಮಿಯಿಂದ ವಸೂಲಿ ಮಾಡಿದ ರೂ 50,000/- ಹಣ ಹಾಗೂ ಕೃತ್ಯಕ್ಕೆ ಬಳಸಿದ ಕಾರು ಮತ್ತು ಮೊಬೈಲ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಕಾರ್ಯಾಚರಣೆಯಲ್ಲಿ ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಋಷಿಕೇಶ್ ಸೋನಾವಾಣೆ ಮತ್ತು ಪುತ್ತೂರು ಉಪ ವಿಭಾಗ ಪೊಲೀಸ್ ಉಪಾಧೀಕ್ಷಕರಾದ ಡಾ||ಗಾನ ಪಿ ಕುಮಾರ್ ರವರ ಮಾರ್ಗದರ್ಶನದಲ್ಲಿ ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕರಾದ ಉಮೇಶ್ ಉಪ್ಪಳಿಗೆ ರವರ ನೇತೃತ್ವದಲ್ಲಿ, ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸ್ ಉಪ ನಿರೀಕ್ಷಕರುಗಳಾದ ಉದಯರವಿ ಎಂ.ವಿ, ಅಮೀನ್ ಸಾಬ್ ಎಂ ಅತ್ತಾರ್, ಹಾಗೂ ಸಿಬ್ಬಂದಿಗಳಾದ ಕೃಷ್ಣಪ್ಪ, ದೇವರಾಜ್, ಅದ್ರಾಮ, ಪ್ರವೀಣ್ ರೈ, ಹರ್ಷಿತ್, ಗಾಯತ್ರಿ, ವಿನೋದ್’ರವರು ಭಾಗಿಯಾಗಿದ್ದರು.

- Advertisement -
spot_img

Latest News

error: Content is protected !!