Sunday, May 5, 2024
Homeಕರಾವಳಿಬಿ.ಸಿ.ರೋಡು-ಅಡ್ಡಹೊಳೆ ಹೆದ್ದಾರಿ ಕಾಮಗಾರಿ ಆರಂಭ; ಕಲ್ಲಡ್ಕ ಪೇಟೆಯ ಕಟ್ಟಡಗಳು ನೆಲಸಮ!

ಬಿ.ಸಿ.ರೋಡು-ಅಡ್ಡಹೊಳೆ ಹೆದ್ದಾರಿ ಕಾಮಗಾರಿ ಆರಂಭ; ಕಲ್ಲಡ್ಕ ಪೇಟೆಯ ಕಟ್ಟಡಗಳು ನೆಲಸಮ!

spot_img
- Advertisement -
- Advertisement -

ಬಂಟ್ವಾಳ: ಬಿ.ಸಿ.ರೋಡು-ಅಡ್ಡಹೊಳೆ ಹೆದ್ದಾರಿ ಅಭಿವೃದ್ಧಿ ನಿಟ್ಟಿನಲ್ಲಿ ಕಲ್ಲಡ್ಕದಲ್ಲಿ ಫ್ಲೈ ಓವರ್‌ ನಿರ್ಮಾಣಕ್ಕಾಗಿ ಭೂಸ್ವಾಧೀನ ಪ್ರಕ್ರಿಯೆ ಪ್ರಾರಂಭಗೊಂಡಿದ್ದು, ರಾಷ್ಟ್ರೀಯ ಹೆದ್ದಾರಿಯು ಭೂ ಸ್ವಾಧೀನಕ್ಕೆ ಗುರುತಿಸಲಾದ ಬಹುತೇಕ ಕಟ್ಟಡಗಳು ರವಿವಾರದ ವೇಳೆಗೆ ನೆಲಸಮಗೊಂಡಿವೆ.

ಬಿ.ಸಿ.ರೋಡು-ಅಡ್ಡಹೊಳೆ ಮಧ್ಯದ 64 ಕಿ.ಮೀ. ಚತುಷ್ಪಥ ರಸ್ತೆಯ ಪೂರ್ವಭಾವಿ ಪ್ರಕ್ರಿಯೆಗಳು ಆರಂಭಗೊಂದು ಕಾಮಗಾರಿ 2 ಹಂತಗಳಲ್ಲಿ ನಡೆಯಲಿದೆ .ಕಲ್ಲಡ್ಕದಿಂದ ಮೆಲ್ಕಾರ್‌ ವರೆಗೂ ಈ ಪ್ರಕ್ರಿಯೆ ನಡೆಯುತ್ತಿದೆ. ಅಡ್ಡಹೊಳೆಯಿಂದ ಪೆರಿಯಶಾಂತಿ ಹಾಗೂ ಪೆರಿಯಶಾಂತಿಯಿಂದ ಬಿ.ಸಿ.ರೋಡುವರೆಗೆ ಎರಡು ಹಂತದ ಕಾಮಗಾರಿ ನಡೆಯಲಿದ್ದು, ಕಲ್ಲಡ್ಕದಲ್ಲಿ ಫ್ಲೈ ಓವರ್‌ ನಿರ್ಮಾಣವಾಗಲಿದೆ.

ಕಲ್ಲಡ್ಕ ಪೇಟೆಯ ಹೆಚ್ಚಿನ ಕಟ್ಟಡಗಳು ಹೆದ್ದಾರಿಗಾಗಿ ತೆರವುಗೊಳ್ಳಲಿದ್ದು, ಅವುಗಳನ್ನು ಸ್ಥಳಾಂತರಗೊಳಿಸುವ ಕಾಮಗಾರಿಯೂ ನಡೆಯುತ್ತಿದೆ. ಕೆಲವು ಹಳೆಯ ಕಟ್ಟಡಗಳ ಹಿಂಭಾಗದಲ್ಲಿ ಹೊಸ ಕಟ್ಟಡಗಳು ನಿರ್ಮಾಣಗೊಳ್ಳುತ್ತಿದ್ದರೆ, ಮತ್ತೆ ಕೆಲವು ಪೇಟೆಯಿಂದ ಹೊರಭಾಗದಲ್ಲಿ ನಿರ್ಮಾಣವಾಗುತ್ತಿದೆ.ಇದರಿಂದ ಕಲ್ಲಡ್ಕ ಪೇಟೆಯ ಚಿತ್ರಣವೇ ಬದಲಾಗುತ್ತಿದೆ.

- Advertisement -
spot_img

Latest News

error: Content is protected !!