Sunday, May 19, 2024
Homeಇತರದೀಪಾವಳಿಯ ಬಲಿಪಾಡ್ಯಮಿ ದಿನದಂದು ಕಡ್ಡಾಯವಾಗಿ ಗೋಪೂಜೆ ನಡೆಸುವಂತೆ ಆದೇಶ ಹೊರಡಿಸಿದ ಧಾರ್ಮಿಕ ದತ್ತಿ ಇಲಾಖೆ ...!

ದೀಪಾವಳಿಯ ಬಲಿಪಾಡ್ಯಮಿ ದಿನದಂದು ಕಡ್ಡಾಯವಾಗಿ ಗೋಪೂಜೆ ನಡೆಸುವಂತೆ ಆದೇಶ ಹೊರಡಿಸಿದ ಧಾರ್ಮಿಕ ದತ್ತಿ ಇಲಾಖೆ …!

spot_img
- Advertisement -
- Advertisement -

ಬೆಂಗಳೂರು: ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ದೇವಸ್ಥಾನಗಳಲ್ಲಿ ದೀಪಾವಳಿಯ ಬಲಿಪಾಡ್ಯಮಿ ದಿನದಂದು ಕಡ್ಡಾಯವಾಗಿ ಗೋಪೂಜೆ ನಡೆಸುವಂತೆ ಧಾರ್ಮಿಕ ದತ್ತಿ ಇಲಾಖೆ ಆದೇಶ ಹೊರಡಿಸಿದೆ.

ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಹೊರಡಿಸಿರುವ ಆದೇಶದಲ್ಲಿ ಈ ಕುರಿತು ಮಾಹಿತಿ ನೀಡಿದ್ದು, ಹಿಂದೂ ಧರ್ಮದಲ್ಲಿ ಗೋವುಗಳಿಗೆ ತಾಯಿಯ ಸ್ಥಾನವನ್ನು ನೀಡಿ, ಗೋಮಾತೆ ದೇವತೆ ಎಂದು ಭಾವಿಸಿ ಪೂಜಿಸಲಾಗುತ್ತದೆ.

ಹಿಂದೂ ಧರ್ಮದ ಪುರಾಣ ಉಪನಿಷತ್ತುಗಳಲ್ಲಿ ಗೋಮಾತೆಗೆ ವಿಶೇಷ ಸ್ಥಾನಮಾನವಿದೆ. ಗೋಮಾತೆಯನ್ನು ಪೂಜಿಸಿದರೆ ಅನೇಕ ಸಮಸ್ಯೆಗಳು ಪರಿಹಾರವಾಗುವುದರ ಜೊತೆಗೆ ವಾಸ್ತು ದೋಷವು ನಿವಾರಣೆಯಾಗುತ್ತದೆ ಎಂಬ ಬಲವಾದ ನಂಬಿಕೆ ನಮ್ಮ ಸಮಾಜದಲ್ಲಿದ್ದು, ಈ ಹಿನ್ನೆಲೆ ಗೋಪೂಜೆ ಸಂಪ್ರದಾಯವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಬರುವ ಎಲ್ಲಾ ದೇವಸ್ಥಾನಗಳಲ್ಲಿ ದೀಪಾವಳಿಯ ಬಲಿಪಾಡ್ಯದಂದು ಕಡ್ಡಾಯವಾಗಿ ಗೋಪೂಜೆ ನಡೆಸುವಂತೆ ಆದೇಶಿಸಲಾಗಿದೆ.

- Advertisement -
spot_img

Latest News

error: Content is protected !!