Sunday, June 7, 2026
Homeಕರಾವಳಿಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಅವರಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ

ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಅವರಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ

- Advertisement -
- Advertisement -

ಬೆಳ್ತಂಗಡಿ: ರಾಜ್ಯ ಉಪಮುಖ್ಯಮಂತ್ರಿ ಹಾಗೂ ಲೋಕೋಪಯೋಗಿ ಇಲಾಖೆ ಸಚಿವ ಗೋವಿಂದ ಎಂ. ಕಾರಜೋಳ ಅವರು ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು.ಮಂಜುನಾಥ ಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ನಂತರ ಅವರು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದು ಸಮಾಲೋಚನೆ ನಡೆಸಿದರು

ಕ್ಷೇತ್ರಕ್ಕೆ ಆಗಮಿಸಿದ ಸಚಿವರನ್ನು ಸ್ವಾಗತಿಸಿಲಾಯಿತು. ಇದೇವೇಳೆ ಸಚಿವರಿಗೆ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಕೆ.ಪ್ರತಾಪಸಿಂಹ ನಾಯಕ್, ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಪುತ್ತೂರು ಸಹಾಯಕ ಆಯುಕ್ತ ಡಾ.ಯತೀಶ್ ಉಳ್ಳಾಲ್, ತಹಶೀಲ್ದಾರ್ ಮಹೇಶ್ ಜೆ ಸೇರಿದಂತೆ ಹಲವು ಗಣ್ಯರು ಜೊತೆಯಾಗಿದ್ದರು.

- Advertisement -

Latest News

error: Content is protected !!