Thursday, May 16, 2024
Homeತಾಜಾ ಸುದ್ದಿಪಾಕಿಸ್ತಾನ ಸಂಸತ್ ವಿಸರ್ಜನೆ: ಮೂರು ತಿಂಗಳಲ್ಲಿ ಚುನಾವಣೆ ನಡೆಸಲು ಸೂಚನೆ

ಪಾಕಿಸ್ತಾನ ಸಂಸತ್ ವಿಸರ್ಜನೆ: ಮೂರು ತಿಂಗಳಲ್ಲಿ ಚುನಾವಣೆ ನಡೆಸಲು ಸೂಚನೆ

spot_img
- Advertisement -
- Advertisement -

ನವದೆಹಲಿ: ಪಾಕಿಸ್ತಾನ ಸಂಸತ್ ವಿಸರ್ಜನೆ ಮಾಡಲಾಗಿದೆ. ಪಾಕಿಸ್ತಾನ ಅಧ್ಯಕ್ಷರು ಅಸೆಂಬ್ಲಿ ವಿಸರ್ಜಿಸಿದ್ದಾರೆ. ಮೂರು ತಿಂಗಳಲ್ಲಿ ಚುನಾವಣೆ ನಡೆಸಲು ಸೂಚನೆ ನೀಡಿದ್ದಾರೆ.

ಪ್ರಧಾನಿ ಇಮ್ರಾನ್ ಖಾನ್ ಇಂದು ಅಧ್ಯಕ್ಷ ಆರಿಫ್ ಅಲ್ವಿ ಅವರನ್ನು ಭೇಟಿ ಮಾಡಿ ರಾಜಕೀಯ ಪರಿಸ್ಥಿತಿ ಕುರಿತು ಚರ್ಚಿಸಿದ್ದು, ಪ್ರಧಾನಿ ಸಲಹೆಯ ಮೇರೆಗೆ ಪಾಕಿಸ್ತಾನದ ಅಧ್ಯಕ್ಷರು ರಾಷ್ಟ್ರೀಯ ಅಸೆಂಬ್ಲಿಯನ್ನು ವಿಸರ್ಜಿಸಿದ್ದಾರೆ. 90 ದಿನಗಳಲ್ಲಿ ಚುನಾವಣೆ ನಡೆಸಿ ಸರ್ಕಾರ ರಚನೆಗೆ ಸೂಚನೆ ನೀಡಿದ್ದಾರೆ. ಸರ್ಕಾರ ಸಂವಿಧಾನವನ್ನು ಉಲ್ಲಂಘಿಸಿದೆ, ಇದರ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಲಿದೆ ಎಂದು ವಿಪಕ್ಷ ನಾಯಕರು ಹೇಳಿದ್ದಾರೆ

ಪಾಕಿಸ್ತಾನ್ ಪೀಪಲ್ಸ್ ಪಾರ್ಟಿಯ ಹಾಲಿ ಅಧ್ಯಕ್ಷ ಬಿಲಾವಲ್ ಭುಟ್ಟೋ ಜರ್ದಾರಿ, ಸರ್ಕಾರವು ಸಂವಿಧಾನವನ್ನು ಉಲ್ಲಂಘಿಸಿದೆ. ಅವಿಶ್ವಾಸ ನಿರ್ಣಯದ ಮೇಲೆ ಮತದಾನಕ್ಕೆ ಅವಕಾಶ ನೀಡಲಿಲ್ಲ. ಪಾಕಿಸ್ತಾನದ ಸಂವಿಧಾನವನ್ನು ರಕ್ಷಿಸಲು ಎಲ್ಲಾ ಪ್ರಯತ್ನ ನಡೆಸುತ್ತೇವೆ ಎಂದು ಹೇಳಿದ್ದಾರೆ.

- Advertisement -
spot_img

Latest News

error: Content is protected !!