Monday, May 20, 2024
Homeತಾಜಾ ಸುದ್ದಿರಕ್ತ ಪರೀಕ್ಷೆ ಮೂಲಕ ಸ್ತನ ಕ್ಯಾನ್ಸರ್ ಪತ್ತೆ; ಭಾರತದಲ್ಲಿಯೂ ಲಭ್ಯವಾಗಲಿದೆ ಹೊಸ ತಂತ್ರಜ್ಞಾನ

ರಕ್ತ ಪರೀಕ್ಷೆ ಮೂಲಕ ಸ್ತನ ಕ್ಯಾನ್ಸರ್ ಪತ್ತೆ; ಭಾರತದಲ್ಲಿಯೂ ಲಭ್ಯವಾಗಲಿದೆ ಹೊಸ ತಂತ್ರಜ್ಞಾನ

spot_img
- Advertisement -
- Advertisement -

ನವದೆಹಲಿ: ಸ್ತನ ಕ್ಯಾನ್ಸರ್‌ನ್ನು ರಕ್ತ ಪರೀಕ್ಷೆಯ ಮೂಲಕ ಆರಂಭಿಕ ಹಂತದಲ್ಲೇ ಪತ್ತೆ ಮಾಡುವ ತಂತ್ರಜ್ಞಾನ ಇನ್ನೂ ಭಾರತದಲ್ಲೂ ಲಭ್ಯವಾಗಲಿದೆ.

ಅಪೋಲೋ ಗ್ರೂಪ್‌ ಆಫ್‌ ಹಾಸ್ಪಿಟಲ್ಸ್‌ನೊಂದಿಗೆ ಪಾಲುದಾರಿಕೆ ಹೊಂದಿರುವ ಖಾಸಗಿ ಕಂಪನಿ ಡಾಟರ್‌ ಕ್ಯಾನ್ಸರ್‌ ಜೆನಿಟಿಕ್ಸ್‌ ವತಿಯಿಂದ ಈ ತಂತ್ರಜ್ಞಾನವನ್ನು ಭಾರತದಲ್ಲಿ ಜೂ.22ರಂದು ಆರಂಭಿಸಲಾಯಿತು.

ಈ ಹೊಸ ತಂತ್ರಜ್ಞಾನದ ಮೂಲಕ ನಡೆಸುವ ರಕ್ತ ಪರೀಕ್ಷೆಯು 40 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಸ್ತನ ಕ್ಯಾನ್ಸರ್‌ನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಲು ಸಹಾಯ ಮಾಡುತ್ತದೆ. ಯೂರೋಪ್‌ನ ಹಲವು ದೇಶಗಳು ಸೇರಿದಂತೆ 15 ರಾಷ್ಟ್ರಗಳು ಅಳವಡಿಸಿಕೊಂಡ ಹೊಸ ಮಾದರಿಯ ರೋಗನಿರ್ಣಯ ತಂತ್ರಜ್ಞಾನ ಇದಾಗಿದೆ. ಈ ರಕ್ತ ಪರೀಕ್ಷೆಯ ಫಲಿತಾಂಶವು ಶೇ.99 ರಷ್ಟು ನಿಖರತೆಯನ್ನು ಹೊಂದಿದೆ ಎಂದು ತಜ್ಞ ವೈದ್ಯರು ಅಭಿಪ್ರಾಯಪಟ್ಟಿದ್ದಾರೆ.

ಇನ್ನೂ ಭಾರತದಲ್ಲಿ ಕ್ಯಾನ್ಸರ್ ಪ್ರಕರಣಗಳು ವರದಿಯಾಗುತ್ತಲೇ ಇದ್ದು, ರೋಗಿಗಳ ಆರೈಕೆ, ಚಿಕಿತ್ಸೆಯ ವೆಚ್ಚವು ದುಬಾರಿಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಕಾನ್ಸರ್ ರೋಗವನ್ನು ಆರಂಭಿಕ ಹಂತದಲ್ಲೇ ಪತ್ತೆ ಹಚ್ಚಿದರೆ ಮಾತ್ರ ಇಂತಹ ಪ್ರಕರಣಗಳನ್ನು ತ್ವರಿತವಾಗಿ ನಿರ್ವಹಿಸಲು ಸಾಧ್ಯ. ಮಹಿಳೆಯರಲ್ಲಿನ ಸ್ತನ ಕ್ಯಾನ್ಸರ್‌ನ್ನು ಆರಂಭಿಕ ಹಂತದಲ್ಲೇ ಪತ್ತೆ ಹೆಚ್ಚಿದರೆ, ಅವರಿಗೆ ಪರಿಣಾಮಕಾರಿಯಾಗಿ ಚಿಕಿತ್ಸೆ ನೀಡಬಹುದು. ಇದರಿಂದ ಮಹಿಳೆಯರ ಜೀವಿತಾವಧಿಯ ಹೆಚ್ಚಳವಾಗಬಹುದು ಎಂಬುದು ವೈದ್ಯರ ಅಭಿಪ್ರಾಯ.

ಈ ಹೊಸ ತಂತ್ರಜ್ಞಾನ ಬಳಸಿಕೊಂಡು ಸ್ತನ ಕ್ಯಾನ್ಸರ್‌ ಪಾಸಿಟಿವ್‌ ಬರುವ ಮಹಿಳೆಯರು ಸಾಂಪ್ರದಾಯಿಕ ಸ್ಕ್ರೀನಿಂಗ್ ಪರೀಕ್ಷೆಗಳಿಗೆ ಹೋಗಬಹುದು ಎನ್ನುತ್ತಾರೆ ದೆಹಲಿಯ ಅಪೋಲೋ ಆಸ್ಪತ್ರೆಯ ಹಿರಿಯ ಶಸ್ತ್ರಚಿಕಿತ್ಸಾ ಆಂಕೊಲಾಜಿಸ್ಟ್ ಡಾ. ರಮೇಶ್ ಸರಿನ್. ಒಂದು ವೇಳೆ ಈ ಪರೀಕ್ಷೆಯಲ್ಲಿ ನೆಗೆಟಿವ್‌ ಫಲಿತಾಂಶ ಬಂದರೆ ಮಹಿಳೆಯರು ಕ್ಯಾನ್ಸರ್‌ನ್ನು ಸಂಪೂರ್ಣವಾಗಿ ತಳ್ಳಿಹಾಕಬಾರದು. ಇತರ ಸ್ಕ್ರೀನಿಂಗ್ ಪರೀಕ್ಷೆಗಳಿಗೆ ಹೋಗಬಹುದು ಎಂದು ವೈದ್ಯರು ಸೂಚಿಸುತ್ತಾರೆ.

ಕಳೆದ ವರ್ಷ ನವೆಂಬರ್‌ನಲ್ಲಿ ವಿಶ್ವ ಆರೋಗ್ಯ ಸಂಸ್ಥೆ (WHO) ಮತ್ತು ಯುಎಸ್ ಫುಡ್ ಅಂಡ್ ಡ್ರಗ್ ಅಡ್ಮಿನಿಸ್ಟ್ರೇಷನ್‌ನಿಂದ ಹೊಸ ತಂತ್ರಜ್ಞಾನದ ರಕ್ತ ಪರೀಕ್ಷೆಯನ್ನು ಅನುಮೋದಿಸಲಾಗಿದೆ. ಈ ರಕ್ತ ಪರೀಕ್ಷೆ ಮೂಲಕ 0 ಹಾಗೂ 1ನೇ ಹಂತದ ಸ್ತನ ಕ್ಯಾನ್ಸರ್ ಪ್ರಕರಣಗಳನ್ನು ಶೇ.99 ರಷ್ಟು ನಿಖರತೆಯೊಂದಿಗೆ ಪತ್ತೆಹಚ್ಚಲಾಗಿದೆ ಎಂಬುದನ್ನು ಅಧ್ಯಯನವು ಸಾಬೀತುಪಡಿಸಿದೆ. 

- Advertisement -
spot_img

Latest News

error: Content is protected !!