Saturday, June 6, 2026
Homeಕರಾವಳಿಮಂಗಳೂರು:ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಮೃತದೇಹ ಪತ್ತೆ!

ಮಂಗಳೂರು:ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಮೃತದೇಹ ಪತ್ತೆ!

- Advertisement -
- Advertisement -

ಮಂಗಳೂರು:ಮನೆಯೊಂದರಲ್ಲಿ ವ್ಯಕ್ತಿಯೋರ್ವರ ಮೃತದೇಹ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಗರದ ಶಿವಭಾಗ್‌ನಲ್ಲಿ ಶನಿವಾರ ಪತ್ತೆಯಾಗಿದೆ.

ಶಿವಭಾಗ್ ನಾಲ್ಕನೇ ಕ್ರಾಸ್‌ನ ನಿವಾಸಿ ಹರೀಶ್ಚಂದ್ರ (52) ಮೃತಪಟ್ಟವರು. ಬೆಳಗ್ಗೆ 9 ಗಂಟೆ ಸುಮಾರಿಗೆ ಹರೀಶ್ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅವರು ಯಾವುದೋ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಕುಟುಂಬ ಮೂಲಗಳು ತಿಳಿಸಿವೆ.

ಮೃತದೇಹವನ್ನು ನಗರದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಮಂಗಳೂರು ಪೂರ್ವ (ಕದ್ರಿ) ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!