- Advertisement -
- Advertisement -
ಬೆಂಗಳೂರು: 2021-22ನೇ ಸಾಲಿನ ದೇವರಾಜ ಅರಸು ಪ್ರಶಸ್ತಿ ವಿಜೇತರಾಗಿದ್ದ ಕೆ. ಭಾಸ್ಕರ ದಾಸ್ ಎಕ್ಕಾರು ಅವರಿಗೆ ಇಂದು ಪ್ರಶಸ್ತಿ ಪ್ರದಾನ ಮಾಡಲಾಯಿತು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶಸ್ತಿ ಪ್ರದಾನ ಮಾಡಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ನಿನ್ನೆಯಷ್ಟೇ ಭಾಸ್ಕರ ದಾಸ್ ಅವರಿಗೆ ಪ್ರಶಸ್ತಿ ಘೋಷಣೆಯಾಗಿತ್ತು.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ತೆಂಕ ಎಕ್ಕಾರು ಗ್ರಾಮದವರಾದ ಭಾಸ್ಕರ ದಾಸ್ ಅವರಿಗೆ ಅಲೆಮಾರಿ ಜನಾಂಗದ ಅಭಿವೃದ್ಧಿಗೆ ಶ್ರಮಿಸಿರುವುದನ್ನು ಗುರುತಿಸಿ ದೇವರಾಜ ಅರಸು ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಮೂರು ವರ್ಷಗಳಿಂದ ಬಾಕಿ ಉಳಿದಿದ್ದ ಅರಸು ಪ್ರಶಸ್ತಿಗಳನ್ನು ಇಂದು ರಾಜ್ಯ ಸರ್ಕಾರ ಪ್ರದಾನ ಮಾಡಿದೆ.
- Advertisement -