Wednesday, June 24, 2026
Homeತಾಜಾ ಸುದ್ದಿರಾಜ್ಯಸಭೆಯಲ್ಲಿ ಎತ್ತಿನಹೊಳೆ ವಿಚಾರ ಪ್ರಸ್ತಾಪಿಸಿದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ

ರಾಜ್ಯಸಭೆಯಲ್ಲಿ ಎತ್ತಿನಹೊಳೆ ವಿಚಾರ ಪ್ರಸ್ತಾಪಿಸಿದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ

- Advertisement -
- Advertisement -

ನವದೆಹಲಿ: ಮಾಜಿ ಪ್ರಧಾನಮಂತ್ರಿ ಹಾಗೂ ರಾಜ್ಯಸಭಾ ಸದಸ್ಯ ಹೆಚ್‌.ಡಿ. ದೇವೇಗೌಡ ಅವರು ರಾಜ್ಯಸಭೆಯಲ್ಲಿ ಎತ್ತಿನಹೊಳೆ ಯೋಜನೆಯ ಕುರಿತಾಗಿ ಪ್ರಸ್ತಾಪಿಸಿದರು.

ಬಜೆಟ್‌ ಅಧಿವೇಶನದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿದ್ದ ದೇವೇಗೌಡರು, ಕರ್ನಾಟಕದಲ್ಲಿ ಆಡಳಿತಾರೂಢ ಕಾಂಗ್ರೆಸ್‌ ಸರ್ಕಾರದ ನಿರ್ಲಕ್ಷದಿಂದ ಎತ್ತಿನಹೊಳೆ ಯೋಜನೆ ಆಮೆಗತಿಯಲ್ಲಿ ಸಾಗಿರುವ ವಿಚಾರವನ್ನು ಸದನದಲ್ಲಿ ಪ್ರಸ್ತಾಪಿಸಿದರು.

ಅಲ್ಲದೇ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕಾಡಾನೆ ದಾಳಿಗೆ ಪ್ರತಿ ದಿನ ಜನರು ಬಲಿಯಾಗುತ್ತಿರುವುದಲ್ಲದೇ, ರೈತರು ಅಪಾರ ಪ್ರಮಾಣದ ಬೆಳೆ ನಷ್ಟ ಅನುಭವಿಸುತ್ತಿದ್ದು, ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ-ಪ್ರಾಣಿ ಸಂಘರ್ಷ ತಡೆಯುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿರುವ ಬಗ್ಗೆಯೂ ಸದನದಲ್ಲಿ ದೇವೇಗೌಡರು ತೀವ್ರ ಕಳವಳ ವ್ಯಕ್ತಪಡಿಸಿದರು.

ಇನ್ನು, ಬೆಂಗಳೂರಿನ ಕೊಳಚೆ ನೀರನ್ನು ಮೂರು ಹಂತಗಳಲ್ಲಿ ಶುದ್ಧೀಕರಿಸದೇ ಚಿಕ್ಕಬಳ್ಳಾಪುರ , ಕೋಲಾರ ಜಿಲ್ಲೆಗಳಿಗೆ ಹರಿಸಲಾಗುತ್ತಿದ್ದು, ಇದರ ಪರಿಣಾಮ ಆ ಭಾಗದಲ್ಲಿ ಬೆಳೆಯುತ್ತಿರುವ ಬೆಳೆಗಳು ಹಾಗೂ ತರಕಾರಿಗಳು ವಿಷಕಾರಿಯಾಗುತ್ತಿದ್ದು, ಜನರ ಜೀವದ ಜೊತೆ ರಾಜ್ಯ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂಬುದನ್ನೂ ಹೆಚ್.ಡಿ. ದೇವೇಗೌಡ ಸದನಕ್ಕೆ ಮನವರಿಕೆ ಮಾಡಿಕೊಟ್ಟರು.

- Advertisement -

Latest News

error: Content is protected !!