Wednesday, June 24, 2026
Homeಕರಾವಳಿಮಂಗಳೂರುಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಡಿಜಿಪಿ ಅಲೋಕ್ ಕುಮಾರ್ ಭೇಟಿ

ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಡಿಜಿಪಿ ಅಲೋಕ್ ಕುಮಾರ್ ಭೇಟಿ

- Advertisement -
- Advertisement -

ಮಂಗಳೂರು: ಕಾರಾಗೃಹ ಇಲಾಖೆ ಡಿಜಿಪಿ ಅಲೋಕ್ ಕುಮಾರ್ ಇಂದು ಮಂಗಳೂರಿನಲ್ಲಿರುವ ಜಿಲ್ಲಾ ಕಾರಾಗೃಹಕ್ಕೆ ಭೇಟಿ ನೀಡಿದ್ದಾರೆ.ಕಾರಾಗೃಹ ಇಲಾಖೆಯ ಡಿಜಿಪಿ ಯಾದ ಬಳಿಕ ಅಲೋಕ್ ಕುಮಾರ್ ಮಂಗಳೂರಿಗೆ ಮೊದಲ ಭೇಟಿ ನೀಡಿದ್ದಾರೆ.

ಮಂಗಳೂರು ನಗರದ ಪಿವಿಎಸ್ ವೃತ್ತದ ಸಮೀಪ ಇರುವ ಕಾರಾಗೃಹಕ್ಕೆ ಭೇಟಿ ನೀಡುವ ವೇಳೆ ಡಿಜಿಪಿ ಅಲೋಕ್ ಕುಮಾರ್ ಅವರಿಗೆ
ಗೌರವ ವಂದನೆ ಸಲ್ಲಿಸಲಾಯಿತು.

ಈ ಮಧ್ಯೆ ನಾಲ್ಕು ದಿನಗಳ ಹಿಂದೆ ಜೈಲಿನಲ್ಲಿ ದಿಢೀರ್ ತಪಾಸಣೆ ನಡೆಸಿದ್ದ ಜೈಲು ಅಧಿಕಾರಿಗಳು, ಆರು ಮೊಬೈಲ್ ಫೋನ್ ಗಳನ್ನು ವಶಕ್ಕೆ ಪಡೆದಿದ್ದರು.

ಬಂಧೀಖಾನೆ ಇಲಾಖೆಯ ಡಿಜಿಪಿಯಾದ ಬಳಿಕ ಅಲೋಕ್ ಕುಮಾರ್ ರಾಜ್ಯದ ವಿವಿಧ ಜೈಲುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!