Wednesday, June 24, 2026
HomeUncategorizedಬೆಂಗಳೂರಿನಿಂದ ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ನೇತೃತ್ವದಲ್ಲಿ ಧರ್ಮಸ್ಥಳ ಚಲೋಗೆ ಚಾಲನೆ

ಬೆಂಗಳೂರಿನಿಂದ ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ನೇತೃತ್ವದಲ್ಲಿ ಧರ್ಮಸ್ಥಳ ಚಲೋಗೆ ಚಾಲನೆ

- Advertisement -
- Advertisement -

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಖಂಡಿಸಿ ಇಂದು ಬೆಂಗಳೂರಿನ ಯಲಹಂಕ ಬಿಜೆಪಿ ವತಿಯಿಂದ ಧರ್ಮಸ್ಥಳ ಚಲೋಗೆ ಚಾಲನೆ ನೀಡಲಾಗಿದೆ.ನೆಲಮಂಗಲ ಟೋಲ್ ಗೇಟ್ ಬಳಿ ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಅವರ ನೇತೃತ್ವದಲ್ಲಿ ಧರ್ಮಸ್ಥಳ ಚಲೋ ಅಭಿಯಾನಕ್ಕೆ ಇಂದು ಬೆಳಿಗ್ಗೆ ಚಾಲನೆ ನೀಡಲಾಯಿತು.

ಶಾಸಕ ವಿಶ್ವನಾಥ್ ವಾಹನಗಳಿಗೆ ಪೂಜೆ ಸಲ್ಲಿಸುವ ಮೂಲಕ ನೂರಾರು ವಾಹನಗಳ ಅಭಿಯಾನವನ್ನು ಆರಂಭಿಸಲಾಯಿತು.ಇಂದು ಸಂಜೆ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರನ ದರ್ಶನ ಪಡೆಯಲಿರುವ ಬಿಜೆಪಿ ಕಾರ್ಯಕರ್ತರು ಪೂಜೆ ಸಲ್ಲಿಸಲಿದ್ದಾರೆ.

ಗುರುವಾರ ವಿಧಾನಸಭೆ ಅಧಿವೇಶನದಲ್ಲಿ ಕೂಡಾ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ನಡೆಯುತ್ತಿದೆ ಎಂದು ವಿಪಕ್ಷ ಬಿಜೆಪಿ ಶಾಸಕರು ಪ್ರಸ್ತಾಪ ಮಾಡಿದ್ದರು‌.

- Advertisement -

Latest News

error: Content is protected !!