Friday, June 5, 2026
Homeಕರಾವಳಿಧರ್ಮಸ್ಥಳ: ವಿವಾಹಿತ ಮಹಿಳೆ ಆತ್ಮಹತ್ಯೆಗೆ ಶರಣು

ಧರ್ಮಸ್ಥಳ: ವಿವಾಹಿತ ಮಹಿಳೆ ಆತ್ಮಹತ್ಯೆಗೆ ಶರಣು

- Advertisement -
- Advertisement -

ಧರ್ಮಸ್ಥಳ: ಇಲ್ಲಿನ ಅಜಕ್ಕುರಿ ಎಂಬಲ್ಲಿ ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ಇಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚೈತ್ರಾ ಅಡಿಗ ಆತ್ಮಹತ್ಯೆಗೆ ಶರಣಾದ ಮಹಿಳೆ.

ಮೃತ ಚೈತ್ರಾ ಮೂರು ವರ್ಷದ ಹಿಂದೆ ಧರ್ಮಸ್ಥಳದ ದೀಪಕ್ ಎಂಬವರ ಜೊತೆ ವಿವಾಹವಾಗಿದ್ದರು. ಈ ದಂಪತಿಗೆ ಒಂದು ಮಗು ಇದೆ. ಚೈತ್ರಾ ಕೆಲ ವರ್ಷದ ಹಿಂದೆ ಉಜಿರೆಯ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸಿದ್ದರು.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಮ್, ಧರ್ಮಸ್ಥಳ ಪಿಎಸ್ಐ ಕೃಷ್ಣಕಾಂತ್ ಪಾಟೀಲ್ ಮತ್ತು ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

- Advertisement -

Latest News

error: Content is protected !!