Monday, June 8, 2026
Homeಕರಾವಳಿಧರ್ಮಸ್ಥಳದ ಮೂಲ ಗಂಧ ಪ್ರಸಾದದ ಮಹಿಮೆ ; ಆಸ್ಕರ್‌ ಅವರ ಮೆದುಳಿನ ಶಸ್ತ್ರ ಚಿಕಿತ್ಸೆ ಯಶಸ್ವಿ

ಧರ್ಮಸ್ಥಳದ ಮೂಲ ಗಂಧ ಪ್ರಸಾದದ ಮಹಿಮೆ ; ಆಸ್ಕರ್‌ ಅವರ ಮೆದುಳಿನ ಶಸ್ತ್ರ ಚಿಕಿತ್ಸೆ ಯಶಸ್ವಿ

- Advertisement -
- Advertisement -

ಮಂಗಳೂರು; ಮಂಗಳೂರಿನ ಯೆನಪೋಯ ಆಸ್ಪತ್ರೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್‌ಗೆ ಮಾಡಲಾದ ಮೆದುಳಿನ ಶಸ್ತ್ರ ಚಿಕಿತ್ಸೆ ಯಶಸ್ವಿ ಯಾಗಿದೆ.

ಮೆದುಳಿನ ರಕ್ತನಾಳ ಹೆಪ್ಪುಗಟ್ಟಿ ಪ್ರಜ್ಞೆ ಕಳೆದುಕೊಂಡಿದ್ದ ಆಸ್ಕರ್ ಫರ್ನಾಂಡಿಸ್‌ಗೆ ಮೆದುಳಿನ ರಕ್ತನಾಳದ ಶಸ್ತ್ರಚಿಕಿತ್ಸೆಯನ್ನು ತಜ್ಞ ವೈದ್ಯರಾದ ಡಾ. ದಿವಾಕರ್ ರಾವ್ ಹಾಗೂ ಡಾ. ಸುನೀಲ್ ಶೆಟ್ಟಿ ನೇತೃತ್ವದ ತಂಡ ನಿನ್ನೆ ತಡರಾತ್ರಿ ಮಾಡಿದೆ.

ಹೆಪ್ಪುಗಟ್ಟಿದ ರಕ್ತವನ್ನು ಶಸ್ತ್ರಚಿಕಿತ್ಸೆ ‌ಮೂಲಕ ಯಶಸ್ವಿಯಾಗಿ ಹೊರ ತೆಗೆದಿದ್ದಾರೆ. ವೈದ್ಯರ ಪರಿಶ್ರಮದಿಂದ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದ್ದು, ಶೀಘ್ರವೇ ಪ್ರಜ್ಞೆ ಮರಳುವ ನಿರೀಕ್ಷೆಯಿದೆ ಎಂದು ವೈದ್ಯರು ಹೇಳಿದ್ದಾರೆ.

ಆಸ್ಕರ್ ಫರ್ನಾಂಡಿಸ್ ಯೋಗ ಮಾಡುವ ವೇಳೆ ಜಾರಿ ಬಿದ್ದು ತಲೆಯ ಒಳಭಾಗದಲ್ಲಿ ಗಾಯವಾಗಿತ್ತು. ಕಳೆದ ಒಂದು ವಾರದಿಂದ ಮಂಗಳೂರಿನ ಯೆನಪೋಯ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಪ್ರಜ್ಞಾ ಹೀನ ಸ್ಥಿತಿಗೆ ತಲುಪಿದ್ದ ಅವರು ತೀವ್ರ ನಿಗಾ ಘಟಕದಲ್ಲಿದ್ದರು.

ಕರ್ನಾಟಕ ಕಾಂಗ್ರೆಸ್‌ನ ಹಿರಿಯ ನಾಯಕರು ಮಂಗಳೂರಿಗೆ ಭೇಟಿ ನೀಡಿ ಆಸ್ಕರ್ ಆರೋಗ್ಯ ಸ್ಥಿತಿ ವಿಚಾರಿಸಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಸಹ ಆಸ್ಪತ್ರೆಗೆ ಭೇಟಿ ಕೊಟ್ಟಿದ್ದರು. ಶ್ರೀ ಮಂಜುನಾಥ ಸ್ವಾಮಿಯ ಮೂಲ ಗಂಧ ಪ್ರಸಾದವನ್ನು ಆಸ್ಕರ್‌ಗೆ ಹಣೆಗೆ ಹಾಕಿ ಶೀಘ್ರ ಆರೋಗ್ಯ ಸುಧಾರಣೆಗೆ ಪ್ರಾರ್ಥಿಸಿದ್ದರು. ಈಗ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ.

- Advertisement -

Latest News

error: Content is protected !!