Thursday, July 23, 2026
Homeಕರಾವಳಿಮಂಗಳೂರುಬೆಳ್ತಂಗಡಿ; ಧರ್ಮಸ್ಥಳದಲ್ಲಿ ಅತ್ಯಾಚಾರಕ್ಕೀಡಾಗಿ ಕೊಲೆಯಾದ ಸೌಜನ್ಯ ಅವರ ತಂದೆ ವಿಧಿವಶ

ಬೆಳ್ತಂಗಡಿ; ಧರ್ಮಸ್ಥಳದಲ್ಲಿ ಅತ್ಯಾಚಾರಕ್ಕೀಡಾಗಿ ಕೊಲೆಯಾದ ಸೌಜನ್ಯ ಅವರ ತಂದೆ ವಿಧಿವಶ

- Advertisement -
- Advertisement -

ಬೆಳ್ತಂಗಡಿ; ಧರ್ಮಸ್ಥಳದಲ್ಲಿ ಅತ್ಯಾಚಾರಕ್ಕೀಡಾಗಿ ಕೊಲೆಯಾದ ಸೌಜನ್ಯ ಅವರ ತಂದೆ ಧರ್ಮಸ್ಥಳ ಗ್ರಾಮದ ಪಾಂಗಾಳ ನಿವಾಸಿ ಚಂದಪ್ಪ ಗೌಡ (58)ರವರು ಅಲ್ಪಕಾಲದ ಅನಾರೋಗ್ಯದಿಂದ ಇಂದು ವಿಧಿವಶರಾಗಿದ್ದಾರೆ.

ಚಂದಪ್ಪ ಗೌಡರವರು ವೃತ್ತಿಯಲ್ಲಿ ಗುತ್ತಿಗೆದಾರರಾಗಿದ್ದು, ಕಳೆದ ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ. ಎರಡು ದಿನಗಳ ಹಿಂದೆ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಆಸ್ಫತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆಗೆ ಸ್ಪಂದಿಸದೆ ನಿಧನ ಹೊಂದಿದ್ದಾರೆ. ಮೃತರು ತಂದೆ ಪೊಣಿ ಗೌಡ, ಪತ್ನಿ ಕುಸುಮಾವತಿ, ಮಕ್ಕಳಾದ ಸೌಮ್ಯ , ಸೌಂದರ್ಯ, ಸೌವರ್ಧ, ಅವರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯೂ ಇಂದು ರಾತ್ರಿ 7.30ಕ್ಕೆ ಪಾಂಗಾಳದಲ್ಲಿ ನಡೆಯಲಿದೆ. .

- Advertisement -

Latest News

error: Content is protected !!