Sunday, June 7, 2026
Homeಕರಾವಳಿಧರ್ಮಸ್ಥಳ : ಗಾಂಜಾ ಸೇವಿಸುತ್ತಿದ್ದ ಯುವಕನನ್ನು ವಶಕ್ಕೆ ಪಡೆದ ಪೊಲೀಸರು

ಧರ್ಮಸ್ಥಳ : ಗಾಂಜಾ ಸೇವಿಸುತ್ತಿದ್ದ ಯುವಕನನ್ನು ವಶಕ್ಕೆ ಪಡೆದ ಪೊಲೀಸರು

- Advertisement -
- Advertisement -

ಧರ್ಮಸ್ಥಳ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಅನಿಲ್.ಕುಮಾರ್.ಡಿ ರವರು ಎ.10 ರಂದು ಗಸ್ತಿನಲ್ಲಿದ್ದಾಗ ಸುಮಾರು 10 ಗಂಟೆ ವೇಳೆಗೆ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ಪೂರ್ಜೆಬೈಲು ಎಂಬಲ್ಲಿ ರಸ್ತೆಯ ಬದಿಯ ಸಾರ್ವಜನಿಕ ಸ್ಥಳದಲ್ಲಿ ಆರೋಪಿ ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಪಟ್ಟೂರು ನಿವಾಸಿ ಖಾಸಿಂ ಮಗನಾದ ರಂಮ್ಲನ್ ಯಾನೆ ಇರ್ಫಾನ್ (25) ಎಂಬತ ನಿಷೇಧಿತ ಮಾದಕ ವಸ್ತುವಾದ ಗಾಂಜಾವನ್ನು ಸೇವನೆ ಮಾಡಿದ್ದನ್ನು ಪತ್ತೆ ಹಚ್ಚಲಾಗಿದೆ.

ಈ ಬಗ್ಗೆ ಪಂಚರ ಸಮಕ್ಷಮ ಮಹಜರು ಮುಖೇನ ಆರೋಪಿಯನ್ನು ವಶಕ್ಕೆ ಪಡೆದು ಆತನನ್ನು ಮಂಗಳೂರು ಕೆ.ಎಸ್.ಹೆಗ್ಡೆ ಆಸ್ಪತ್ರೆಯ ವೈದ್ಯಾಧಿಕಾರಿಯವರ ಮುಂದೆ ಹಾಜರುಪಡಿಸಿ ವೈದ್ಯಾಧಿಕಾರಿಯವರು ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಸೇವನೆ ಮಾಡಿರುವುದಾಗಿ ದೃಢಪತ್ರ ನೀಡಿರುವುದರಿಂದ ಆರೋಪಿಯ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

- Advertisement -

Latest News

error: Content is protected !!