Monday, July 20, 2026
Homeಕರಾವಳಿಮಂಗಳೂರು : ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿಯಾಗಿ ಧರ್ಮಸ್ಥಳ ಯಕ್ಷಗಾನ ಮೇಳದ ಸಿಬ್ಬಂದಿ ಸಾವು

ಮಂಗಳೂರು : ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿಯಾಗಿ ಧರ್ಮಸ್ಥಳ ಯಕ್ಷಗಾನ ಮೇಳದ ಸಿಬ್ಬಂದಿ ಸಾವು

- Advertisement -
- Advertisement -

ಮಂಗಳೂರು : ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿಯಾಗಿ ಧರ್ಮಸ್ಥಳ ಯಕ್ಷಗಾನ ಮೇಳದ ಸಿಬ್ಬಂದಿ ಸಾವನ್ನಪ್ಪಿರುವ ಘಟನೆ ಸುರತ್ಕಲ್ ಬಳಿಯ ಮುಕ್ಕ ಎಂಬಲ್ಲಿ ಎ 14 ರಂದು ಸಂಜೆ ನಡೆದಿದೆ. ಬೆಳಾಲಿನ ಜೀವನ್ ಕುಮಾರ್  (36) ಮೃತ ದುರ್ದೈವಿ.

ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದ ಯಕ್ಷಗಾನ ಸುರತ್ಕಲ್ ಸಮೀಪದ ಮುಕ್ಕದಲ್ಲಿ  ಆಯೋಜನೆ ಮಾಡಲಾಗಿತ್ತು.ಇಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬೆಳಾಲಿನ ಜೀವನ್ ಕುಮಾರ್  ನಿನ್ನೆ ಸಂಜೆ 4.30 ರ ಸುಮಾರಿಗೆ ರಸ್ತೆ ದಾಟುತ್ತಿರುವ ಸಂದರ್ಭ ವೇಗವಾಗಿ ಬಂದ ಕಾರೊಂದು ಅವರಿಗೆ  ಡಿಕ್ಕಿ ಹೊಡೆದಿದೆ.‌ ಡಿಕ್ಕಿಯ ರಭಸಕ್ಕೆ ರಸ್ತೆಗೆಸೆಯಲ್ಪಟ್ಟ  ಜೀವನ್ ಕುಮಾರ್   ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ  ಸಾವನ್ನಪ್ಪಿದ್ದಾರೆ. 

ಜೀವನ್ ಧರ್ಮಸ್ಥಳ ಮೇಳದಲ್ಲಿ ಸುಮಾರು 15 ವರ್ಷಗಳಿಗಿಂತಲೂ ಹೆಚ್ಚು ಸಮಯಗಳಿಂದ ಕೆಲಸ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ.

- Advertisement -

Latest News

error: Content is protected !!