
ಬೆಳ್ತಂಗಡಿ: ಧರ್ಮಸ್ಥಳದ ಅಣ್ಣಪ್ಪ ಬೆಟ್ಟದ ಬಳಿ ಸಾರ್ವಜನಿಕ ರಸ್ತೆಯ ಬದಿಯಲ್ಲಿ ಜೂ.14 ರಂದು ಯಾವುದೋ ಕಾಯಿಲೆಯಿಂದ ಅಸ್ವಸ್ಥಗೊಂಡಿದ್ದ ಅಪರಿಚಿತ ವ್ಯಕ್ತಿ ಜೂ.25ರಂದು ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಮೃತರ ವಯಸ್ಸು ಸುಮಾರು 60-65 ವರ್ಷ ಆಗಿದ್ದು, ಎತ್ತರ 5.3 ಅಡಿ, ಸಪೂರ ಶರೀರ, ಎಣ್ಣೆಕಪ್ಪು ಮೈಬಣ್ಣ, ಕೋಲುಮುಖ, ಅಗಲ ಹಣೆ, ಮುಖದಲ್ಲಿ ಬಿಳಿ ನೆರೆತ ಗಡ್ಡ-ಮೀಸೆ, ತಲೆಯಲ್ಲಿ ಬಿಳಿ ನೆರೆತ ಕೂದಲು, ಹಣೆಯ ಎಡಭಾಗ ಎಡಕಣ್ಣಿನ ಮೇಲ್ಬಾಗದಲ್ಲಿ ಕಪ್ಪು ಎಳ್ಳು ಮಚ್ಚೆ ಗುರುತು ಇದ್ದು, ಮೃತದೇಹದ ಮೈಮೇಲೆ ಆಸ್ಪತ್ರೆಯ ಬಾಬ್ತು ಡೈಫರ್ ಮತ್ತು ಸೊಂಟದಲ್ಲಿ ಕೆಂಪು ಉಡಿದಾರ-1 ನ್ನು ಧರಿಸಿರುತ್ತಾರೆ. ಮೃತರ ವಾರೀಸುದಾರರು ಪತ್ತೆಯಾದಲ್ಲಿ 08256 277253, E-Mail ID [email protected] PSI DHARMASTHALA: 7795424204, 8277986449. CPI BELTHANGADY: 9480805336, Dist Control: 0824-2220500, ಗೆ ಸಂಪರ್ಕಿಸಬೇಕಾಗಿ ಈ ಮೂಲಕ ಕೋರಿಕೆ.


