Friday, June 5, 2026
Homeಕರಾವಳಿಧರ್ಮಸ್ಥಳಕ್ಕೆ ಪಾದಯಾತ್ರೆ ಬಂದ ವ್ಯಕ್ತಿ ನೇತ್ರಾವತಿ ನದಿಯಲ್ಲಿ ಮುಳುಗಿ ಸಾವು

ಧರ್ಮಸ್ಥಳಕ್ಕೆ ಪಾದಯಾತ್ರೆ ಬಂದ ವ್ಯಕ್ತಿ ನೇತ್ರಾವತಿ ನದಿಯಲ್ಲಿ ಮುಳುಗಿ ಸಾವು

- Advertisement -
- Advertisement -

ಬೆಳ್ತಂಗಡಿ : ಚಿಕ್ಕಮಗಳೂರಿನಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಬಂದ ವ್ಯಕ್ತಿ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಧರ್ಮಸ್ಥಳದ ನೇತ್ರಾವತಿಯಲ್ಲಿ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ಗೌದನಹಳ್ಳಿ ನಿವಾಸಿ ಚಂದ್ರಶೇಖರ್(40) ಸಾವನ್ನಪ್ಪಿದವರು.

ಮೃತ ಚಂದ್ರಶೇಖರ್

ಚಿಕ್ಕಮಗಳೂರು ಜಿಲ್ಲೆಯಲ್ಲಿ ತರಕಾರಿ ವ್ಯಾಪಾರ ಮಾಡಿಕೊಂಡಿದ್ದ ಚಂದ್ರಶೇಖರ್ ಸ್ನೇಹಿತನಾದ ವೆಂಕಟೇಶ್ ಜೊತೆ ಧರ್ಮಸ್ಥಳಕ್ಕೆ ಚಾರ್ಮಾಡಿ ಘಾಟ್ ಮೂಲಕ ಪಾದಯಾತ್ರೆ ಮಾಡಿಕೊಂಡು ಇಂದು ಧರ್ಮಸ್ಥಳ ನೇತ್ರಾವತಿಗೆ ಬಂದಿದ್ದು ಈ ವೇಳೆ ಸ್ನಾನ ಮಾಡಲು ಇಳಿದಿದ್ದು ಈಜಲು ಬಾರದೆ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಶವವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಶವಪರೀಕ್ಷೆಗೆ ತರಲಾಗಿದ್ದು, ಘಟನೆಯ ಕುರಿತು ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!