Friday, October 16, 2026
Homeಕರಾವಳಿಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಧರಣಿ

ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಧರಣಿ

- Advertisement -
- Advertisement -

ಉಳ್ಳಾಲ: ಎಸ್‌ಐಆರ್ ವಿರುದ್ಧ, ಜನತಂತ್ರದ ರಕ್ಷಣೆಗಾಗಿ ಹಾಗೂ ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಶುಕ್ರವಾರ ತೊಕ್ಕೊಟ್ಟು ಬಸ್ ತಂಗುದಾಣದ ಬಳಿ ಅಹೋರಾತ್ರಿ ಧರಣಿ ನಡೆಯಿತು.

ಪ್ರತಿಭಟನೆಯಲ್ಲಿ ಮಾತನಾಡಿದ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಕೋಟ್ಯಂತರ ಮತದಾರರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲು ಚುನಾವಣಾ ಆಯೋಗ ಮುಂದಾಗಿದೆ ಎಂದು ಆರೋಪಿಸಿದರು. ಜ್ಞಾನೇಶ್ ಕುಮಾರ್ ಅವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ ಮಾತನಾಡಿ, ಎಸ್‌ಐಆರ್ ಮೂಲಕ ಮತದಾರರ ಹಕ್ಕುಗಳನ್ನು ಕಸಿಯಲು ಬಿಜೆಪಿ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಮತದಾರರ ಪಟ್ಟಿಯಿಂದ ಕೋಟ್ಯಂತರ ಜನರನ್ನು ಹೊರಗಿಡುವುದು ಅನ್ಯಾಯವಾಗಿದ್ದು, ಜ್ಞಾನೇಶ್ ಕುಮಾರ್ ಅವರನ್ನು ಬಂಧಿಸಬೇಕು ಅಥವಾ ಹುದ್ದೆಯಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು. ಬೇಡಿಕೆ ಈಡೇರದಿದ್ದರೆ ನಿರಂತರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರಾದ ರಮೇಶ್ ಬೋಳಿಯಾರ್, ಮನ್ಸೂರ್ ಮಂಚಿಲ, ರಝಿಯಾ ಇಬ್ರಾಹಿಂ, ಮುಸ್ತಫಾ ಹರೇಕಳ, ನವಾಝ್ ನರಿಂಗಾನ ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -

Latest News

error: Content is protected !!