Friday, June 5, 2026
Homeತಾಜಾ ಸುದ್ದಿಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ದಂಪತಿ

ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ದಂಪತಿ

- Advertisement -
- Advertisement -

ಬೆಂಗಳೂರು: ಸ್ಯಾಂಡಲ್​ವುಡ್​ನ  ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ವರಮಹಾಲಕ್ಷ್ಮೀ ಹಬ್ಬದ ದಿನವೇ ಗುಡ್ ನ್ಯೂಸ್ ಒಂದನ್ನು ಕೊಟ್ಟಿದ್ದಾರೆ. ಧ್ರುವ ಸರ್ಜಾ ಪ್ರೇರಣಾ ಶಂಕರ್ ದಂಪತಿ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ.

ಕಳೆದ ವರ್ಷ 2022ರ ಅಕ್ಟೋಬರ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದ ಪ್ರೇರಣಾ ಈಗ ಎರಡನೇ ಮಗುವಿನ ಸ್ವಾಗತಕ್ಕೆ ಸಜ್ಜಾಗಿದ್ದಾರೆ.ಈ ಸಿಹಿಸುದ್ದಿಯನ್ನು ವರಮಹಾಲಕ್ಷ್ಮಿ ಹಬ್ಬದಂದು ಒಂದು ಸುಂದರ ವಿಡಿಯೋ ಮೂಲಕ ತಮ್ಮ ಅಭಿಮಾನಿಗಳಿಗೆ ಹಾಗೂ ಹಿತೈಷಿಗಳಿಗೆ ತಿಳಿಸಿದ್ದಾರೆ.

ಧ್ರುವ ಸರ್ಜಾ ಪತ್ನಿ ಪ್ರೇರಣಾ ಈಗ ಎಂಟು ತಿಂಗಳ ತುಂಬು ಗರ್ಭಿಣಿ. ಧ್ರುವ ದಂಪತಿ ಸೆಪ್ಟೆಂಬರ್ ಎರಡನೇ ವಾರ ಅಥವಾ ಮೂರನೇ ವಾರ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ.

2019ರ ನವೆಂಬರ್ 24ರಂದು ಬೆಂಗಳೂರು ಮೂಲದ ಪ್ರೇರಣಾ ಶಂಕರ್ ಜೊತೆ ಧ್ರುವ ಸರ್ಜಾ ವಿವಾಹವಾಗಿದ್ದರು. ಸದ್ಯ ಧ್ರುವ ಸರ್ಜಾ ಪ್ರೇಮ್ ಜೊತೆಗೆ ಕೆಡಿ ಚಿತ್ರದ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ.

- Advertisement -

Latest News

error: Content is protected !!