Thursday, June 4, 2026
Homeಕರಾವಳಿಮಂಗಳೂರಿನಲ್ಲಿ ಧ್ಯಾನ್ ಚಂದ್ ಮತ್ತು ಜೀಜಾ ಮಾತೆ ಪ್ರಶಸ್ತಿ ಪ್ರದಾನ

ಮಂಗಳೂರಿನಲ್ಲಿ ಧ್ಯಾನ್ ಚಂದ್ ಮತ್ತು ಜೀಜಾ ಮಾತೆ ಪ್ರಶಸ್ತಿ ಪ್ರದಾನ

- Advertisement -
- Advertisement -

ಮಂಗಳೂರು: ರಾಷ್ಟ್ರೀಯ ಕ್ರೀಡಾ ದಿನಾಚರಣೆ -2023, ಕ್ರೀಡಾ ಭಾರತಿ ಧ್ಯಾನ್ ಚಂದ್ ಪ್ರಶಸ್ತಿ ಮತ್ತು ಜೀಜಾ ಮಾತೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಮಂಗಳೂರಿನ ಶಕ್ತಿ ನಗರದಲ್ಲಿ ನಡೆಯಿತು.

ಕ್ರೀಡಾ ಭಾರತಿ ಮತ್ತು ಶಕ್ತಿ ವಿದ್ಯಾಸಂಸ್ಥೆ ಶಕ್ತಿ ನಗರ ವತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಸಂಸದ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಇದೇ ವೇಳೆ ಪುರುಷರು ಮತ್ತು ಮಹಿಳೆಯರ ಜಿಲ್ಲಾಮಟ್ಟದ ವಾಲಿಬಾಲ್ ಹಾಗೂ ತ್ರೋಬಾಲ್ ಪಂದ್ಯಾವಳಿಯ ಉದ್ಘಾಟನಾ ಕೂಡಾ ನಡೆಯಿತು.

ಕಾರ್ಯಕ್ರಮದಲ್ಲಿ ಮಾಜಿ ಸಚಿವ ನಾಗರಾಜ ಶೆಟ್ಟಿ, ಸದಾನಂದ ಶೆಟ್ಟಿ, ಸಂಸ್ಥೆಯ ಮುಖ್ಯಸ್ಥರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

- Advertisement -

Latest News

error: Content is protected !!